ದೇಶದಲ್ಲಿ ರಾಷ್ಟ್ರೀಯ ಪಕ್ಷಗಳು ಸಂಗ್ರಹಿಸಿದ ಹಣ 15,077.97 ಕೋಟಿ ರೂಪಾಯಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

2004-2015 ಮತ್ತು 2020-21ರ ಅವಧಿಯಲ್ಲಿ ರಾಷ್ಟ್ರೀಯ ಪಕ್ಷಗಳು ಸುಮಾರು 15,077,97 ಕೋಟಿ ರೂಪಾಯಿ ಹಣವನ್ನು ವಿವಿಧ ಮೂಲಗಳಿಂದ ಸಂಗ್ರಹಿಸಿವೆ ಎಂದು ಚುನಾವಣಾ ಹಕ್ಕುಗಳ ಸಂಸ್ಥೆ ಅಸೋಸಿಯೇಷನ್ ಫಾರ್ ಡೆಮಾಕ್ರಾಟಿಕ್ ರಿಫಾರ್ಮ್ಸ್ (ಎಡಿಆರ್) ಹೇಳಿದೆ.

2020-21ರ ಸಾಲಿನಲ್ಲಿ 8ರಾಷ್ಟ್ರೀಯ ಮತ್ತು 27 ಪ್ರಾದೇಶಿಕ ಪಕ್ಷಗಳು 690.67 ಕೋಟಿ ರೂ.ಗಳನ್ನು ಸಂಗ್ರಹಿಸಿವೆ. ಭಾರತೀಯ ಜನತಾ ಪಕ್ಷ(ಬಿಜೆಪಿ), ಭಾರತೀಯ ರಾಷ್ಟ್ರೀಯ ಕಾಂಗ್ರೆಸ್(ಐಎನ್‌ಸಿ), ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಟಿಎಂಸಿ), ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾ(ಸಿಪಿಎಂ), ರಾಷ್ಟ್ರೀಯ ಕಾಂಗ್ರೆಸ್ ಪಕ್ಷ(ಎನ್‌ಸಿಪಿ), ಬಹುಜನ ಸಮಾಜ ಪಕ್ಷ(ಬಿಎಸ್ಪಿ), ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾ(ಸಿಪಿಐ) ಮತ್ತು ರಾಷ್ಟ್ರೀಯ ಪೀಪಲ್ಸ್ ಪಾರ್ಟಿ ರಾಷ್ಟ್ರೀಯ ಪಕ್ಷಗಳು ಸೇರಿವೆ. ಇನ್ನು ಪ್ರಾದೇಶಿಕ ಪಕ್ಷಗಳಾದ ಎಎಪಿ, ಎಜಿಪಿ, ಎಐಎಡಿಎಮ್‌ಕೆ, ಮತ್ತು ಇತರೆ ಪಕ್ಷಗಳು ಹಣ ಸಂಗ್ರಹಿಸಿವೆ ಎಂದು ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!