ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಮುಜರಾಯಿ ಇಲಾಖೆಯ 36 ಸಾವಿರ ದೇಗುಲಗಳಲ್ಲಿ ಹುಂಡಿ ಹಣ ಬಳಕೆ ಬಗ್ಗೆ ಫಲಕ ಹಾಕಲು ಸರ್ಕಾರ ಸಜ್ಜಾಗಿದೆ.
ದೇವಾಲಯಗಳಿಂದ ಸಂಗ್ರಹವಾದದ ಹಣವನ್ನು ಮಸೀದಿ, ಚರ್ಚ್ ಹಾಗೂ ಇತರೆ ಇಲಾಖೆಗಳಿಗೆ ನೀಡಲಾಗುತ್ತಿದೆ ಎನ್ನುವ ಆರೋಪ ಕೇಳಿಬರುತ್ತಲೇ ಇವೆ. ಹೀಗಾಗಿ ದೇವಸ್ಥಾನದ ಹುಂಡಿ ಹಣ ದೇಗುಲದ ಅಭಿವೃದ್ಧಿಗೆ ಮಾತ್ರ ಬಳಕೆ ಮಾಡಲಾಗುತ್ತೆ. ದೇಗುಲದ ಹಣ ಬೇರೆ ಇಲಾಖೆಗಳಿಗೆ ವರ್ಗಾಯಿಸುವುದಿಲ್ಲ ಎಂದು ಎಲ್ಲಾ ದೇವಸ್ಥಾನಗಳಲ್ಲಿ ಫಲಕ ಹಾಕಲು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.
ದೇಗುಲದ ಹಣ ಮಸೀದಿ, ಚರ್ಚ್ಗಳಿಗೆ ಬಳಕೆ ಆಗುತ್ತಿದೆ ಎಂದು ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಎಚ್ಚೆತ್ತ ಮುಜರಾಯಿ ಇಲಾಖೆ, ದೇವಸ್ಥಾನದ ಹುಂಡಿ ಹಣ ದೇಗುಲದ ಅಭಿವೃದ್ಧಿಗೆ ಮಾತ್ರ ಬಳಕೆ. ಬೇರೆ ಇಲಾಖೆಗಳಿಗೆ ವರ್ಗಾಯಿಸುವುದಿಲ್ಲ ಎಂದು ರಾಜ್ಯದ 36,000 ದೇವಸ್ಥಾನಗಳಲ್ಲೂ ಫಲಕ ಹಾಕಲು ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ.
ಕರ್ನಾಟಕದಲ್ಲಿ ಒಟ್ಟು ಮುಜರಾಯಿ ಇಲಾಖೆ ಅಡಿಯಲ್ಲಿ 36 ಸಾವಿರ ದೇವಸ್ಥಾನಗಳು ಇದ್ದು, ಇವುಗಳಿಗೆ ಕಾಣಿಕೆ ಹರಿದುಬರುತ್ತಿದೆ.ಕುಕ್ಕೆಸುಬ್ರಮಣ್ಯ , ಹಾಸನಾಂಬೆ, ಕೊಪ್ಪಳದ ಹುಲಿಗೆಮ್ಮ, ಸವದತ್ತಿ ಯಲ್ಲಮ್ಮ, ಹೀಗೆ ದೊಡ್ಡ ದೊಡ್ಡ ದೇವಸ್ಥಾನಗಳಲ್ಲಿ ಲಕ್ಷಾಂತರ ರೂಪಾಯಿ ಕಾಣಿಕೆ ಸಂಗ್ರಹವಾಗುತ್ತಿದೆ.
ಇನ್ನು ದೇವಸ್ಥಾನದಿಂದ ಬಂದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಉಪಯೋಗ ಮಾಡಿಕೊಳ್ಳಲಾಗುತ್ತಿದೆ. ಅದರಲ್ಲೂ ಹಿಂದು ದೇಗುಲದ ಹಣವನ್ನು ಮಸೀದಿ, ಚರ್ಚ್ಗಳ ಅಭಿವೃದ್ಧಿ ನೀಡಲಾಗುತ್ತಿದೆ. ಹೀಗಾಗಿ ಹಿಂದು ದೇಗುಲಗಳು ಮೂಲಸೌಕರ್ಯಗಳಿಂದ ವಂಚಿತವಾಗಿವೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಇದರಿಂದ ದೇಗುಲದ ಹಣ ಬೇರೆ ಇಲಾಖೆಗೆ ವರ್ಗಾವಣೆ ಮಾಡಲ್ಲ ಎಂದು ಗ್ಯಾರಂಟಿ ಬೋರ್ಡ್ ಮೂಲಕ ಭಕ್ತರಿಗೆ ತಿಳಿಸಲು ಮುಜುರಾಯಿ ಇಲಾಖೆ ಮುಂದಾಗಿದೆ.