NDA ಒಕ್ಕೂಟಕ್ಕೆ ಶಾಕ್ ಕೊಟ್ಟ ‘MOOD’ ಆಫ್ ದಿ ನೇಷನ್’ ಸಮೀಕ್ಷೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

 

ಇಂಡಿಯಾ ಟುಡೇ ಗ್ರೂಪ್‌ನ ಮೂಡ್ ಆಫ್ ದಿ ನೇಷನ್ ಸಮೀಕ್ಷೆಯನ್ನು ಬಿಡುಗಡೆ ಮಾಡಲಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ 335 ಸ್ಥಾನಗಳೊಂದಿಗೆ ಸತತ ಮೂರನೇ ಅವಧಿಗೆ ಅಧಿಕಾರಕ್ಕೆ ಮರಳುವ ನಿರೀಕ್ಷೆಯಿದೆ ಎಂದು ಸಮೀಕ್ಷೆ ತಿಳಿಸಿದೆ.

ಬಿಜೆಪಿ ಏಕಾಂಗಿಯಾಗಿ 304 ಸ್ಥಾನಗಳನ್ನು ಗೆಲ್ಲುವ ಅವಕಾಶವಿದೆ. ಹಲವು ರಾಜ್ಯಗಳಲ್ಲಿ ಬಿಜೆಪಿ ಮತ್ತೊಮ್ಮೆ ನಿರ್ಣಾಯಕ ಗೆಲುವು ಸಾಧಿಸಲಿದೆ.

ಈ ಬಾರಿ ಎನ್‌ಡಿಎ 18 ಸ್ಥಾನಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಇದರಿಂದ I.N.D.I.A ಒಕ್ಕೂಟಕ್ಕೆ ಲಾಭವಾಗಲಿದೆ ಎಂದು ಸಮೀಕ್ಷೆ ತಿಳಿಸಿದೆ. ಈ ಬಾರಿ I.N.D.I.A 166 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ ಎನ್ನಲಾಗಿದೆ. ಈ ಸಮೀಕ್ಷೆಯ ಪ್ರಕಾರ ಇತರೆ ಪಕ್ಷಗಳು 42 ಸ್ಥಾನಗಳನ್ನು ಗೆಲ್ಲಬಹುದು ಎಂದು ಇಂಡಿಯಾ ಟುಡೇ ಗ್ರೂಪ್‌ನ ಮೂಡ್ ಆಫ್ ದಿ ನೇಷನ್ ಸಮೀಕ್ಷೆ ಭವಿಷ್ಯ ನುಡಿದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!