ಹೊಸದಿಗಂತ ಡಿಜಿಟಲ್ ಡೆಸ್ಕ್:
ಚುನಾವಣೆ ಕಾವು ಜೋರಾಗಿದೆ. ಕರ್ನಾಟಕದ ಮೂರು ಮತ್ತು ಕೇರಳದ ಒಂದು ಕ್ಷೇತ್ರಕ್ಕೆ ಉಪಚುನಾವಣೆ ನಡೆದಿದೆ. ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆ ನಡೆದಿದೆ. ಈ ಎಲ್ಲ ಕ್ಷೇತ್ರಗಳ ಫಲಿತಾಂಶ ಇಂದು ಪ್ರಕಟವಾಗಲಿದೆ.
ಕರ್ನಾಟಕದಲ್ಲಿ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಜಿದ್ದಾಜಿದ್ದಿ ಕ್ಷೇತ್ರಗಳಾಗಿವೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರವು ಎನ್‌ಡಿಎ ಮತ್ತು ಕಾಂಗ್ರೆಸ್ ಮೈತ್ರಿಕೂಟದ ನಡುವಿನ ರಣಾಂಗಣವಾಗಿದೆ. ಚನ್ನಪಟ್ಟಣ ಭಾಗದಲ್ಲಿ ಎನ್‌ಡಿಎ ಮೈತ್ರಿಕೂಟದ ನಿಖಿಲ್ ಕುಮಾರಸ್ವಾಮಿ ಮತ್ತು ಕಾಂಗ್ರೆಸ್‌ನ ಯೋಗೇಶ್ವರ್ ಕಣದಲ್ಲಿದ್ದಾರೆ. ಶಿಗ್ಗಾಂವಿಯಿಂದ ಎನ್‌ಡಿಎ ಮೈತ್ರಿಕೂಟದಿಂದ ಭರತ ಬೊಮ್ಮಾಯಿ ಕಾಂಗ್ರೆಸ್ನಿಂದ ಯಾಸಿರ್ ಅಹಮದ್ ಖಾನ್ ಪಠಾಣ್ ಕಣದಲ್ಲಿದ್ದಾರೆ. ಕೊನೆಯದಾಗಿ ಸಂಡೂರಲ್ಲಿ ಎನ್‌ಡಿಎ ಮೈತ್ರಿಕೂಟದಿಂದ ಬಂಗಾರು ಹನುಮಂತು ಮತ್ತು ಕಾಂಗ್ರೆಸ್ನಿಂದ ಅನ್ನಪೂರ್ಣ ತುಕಾರಾಂ ಕಣದಲ್ಲಿದ್ದರೆ.
ಪ್ರಿಯಾಂಕಾ ಗಾಂಧಿ ವಾದ್ರಾ ಕೇರಳದ ವಯನಾಡ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣದಲ್ಲಿದ್ದರೆ. ಈ ಎಲ್ಲ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಇಂದು ನಿರ್ಧಾರವಾಗಲಿದೆ.