ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ವಿಜಯ್ ದೇವರಕೊಂಡ ನಟನೆಯ ಲಿಗರ್ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಕೇವಲ 24 ಗಂಟೆಗಳಲ್ಲಿ 16 ಮಿಲಿಯನ್ ವೀಕ್ಷಣೆ ಪಡೆದುಕೊಂಡಿದೆ.
ಈ ಚಿತ್ರದಲ್ಲಿ ಬಾಕ್ಸಿಂಗ್ ಲೆಜೆಂಡ್ ಮೈಕ್ ಟೈಸನ್ ಹಾಗೂ ವಿಜಯ್ ದೇವರಕೊಂಡ ಕಾಂಬಿನೆಷನ್ ನಲ್ಲಿ ಫೈಟ್ ನಡೆಯಲಿದೆ. ಹೀಗಾಗಿ ಎಲ್ಲಾ ಸಿನಿಪ್ರೇಮಿಗಳು ಈ ಚಿತ್ರದ ಬಗ್ಗೆ ನಿರೀಕ್ಷೆ ಇಟ್ಟಿದ್ದಾರೆ. ಅದರಂತೆ ಈ ಸಿನಿಮಾದ ಮೊದಲ ಟೀಸರ್ ಕೂಡ ದಾಖಲೆ ಬರೆದುಕೊಂಡಿದೆ.
ಈ ಚಿತ್ರಕ್ಕೆ ಸುಮಾರು 125 ಕೋಟಿ ರೂ. ವೆಚ್ಚ ಮಾಡಲಾಗಿದ್ದು, ಪುರಿ ಜಗನ್ನಾಥ್ ಸಿನಿಮಾಗೆ ಕಥೆ ಹಾಗೂ ನಿರ್ದೇಶನ ಮಾಡಿದ್ದಾರೆ. ಕರಣ್ ಜೋಹರ್ ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾ ಹಿಂದಿಯಲ್ಲಿ ಮೂಡಿಬರಲಿದ್ದು, ತೆಲುಗು, ತಮಿಳು, ಮಲಯಾಳಂ ಹಾಗೂ ಕನ್ನಡ ಭಾಷೆಗಳಲ್ಲೂ ತೆರೆಕಾಣಲಿದೆ. 2022ರ ಆಗಸ್ಟ್ 25ಕ್ಕೆ ಚಿತ್ರ ತೆರೆಗೆ ಬರಲಿದೆ.