Saturday, September 23, 2023

Latest Posts

ಬಾಲಕಿಯನ್ನು ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ ವ್ಯಕ್ತಿ ವಿರುದ್ಧ ತಾಯಿ ದೂರು

ದಿಗಂತ ವರದಿ ಅಂಕೋಲಾ:

ಅಪ್ರಾಪ್ತ ವಯಸ್ಸಿನ ಬಾಲಕಿಯೊಂದಿಗೆ ಆತ್ಮೀಯತೆ ಬೆಳಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ ಆಕೆ ಗರ್ಭಿಣಿಯಾಗಲು ಕಾರಣನಾದ ವ್ಯಕ್ತಿಯ ಮೇಲೆ ಬಾಲಕಿಯ ತಾಯಿ ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
ಅಗಸೂರು ನಿವಾಸಿ ಅಜಿತ್ ಬಾಬು ಪೆಡ್ನೇಕರ್ ಎಂಬಾತನ ಮೇಲೆ ಅಪ್ರಾಪ್ತ ಬಾಲಕಿಯ ಮೇಲೆ ಬಲತ್ಕಾರವಾಗಿ ದೈಹಿಕ ಸಂಪರ್ಕ ಬೆಳೆಸಿದ ಕುರಿತು ದೂರು ನೀಡಲಾಗಿದ್ದು ಈತ ವಿವಾಹಿತನಾದರೂ ಬಾಲಕಿಯ ಜೊತೆ ಸ್ನೇಹ ಬೆಳೆಸಿ ಮದುವೆಯಾಗುವುದಾಗಿ ನಂಬಿಸಿದನಲ್ಲದೇ ಅಗಸ್ಟ್ ತಿಂಗಳ 22 ರಂದು ತನ್ನ ತಾಯಿಯನ್ನು ಭೇಟಿ ಮಾಡಿಸುವುದಾಗಿ ಕರೆದುಕೊಂಡು ಹೋಗಿ ಬಲತ್ಕಾರವಾಗಿ ದೈಹಿಕ ಸಂಪರ್ಕ ಹೊಂದಿದ್ದಾನೆ ಮತ್ತು ಈ ವಿಷಯವನ್ನು ಬಹಿರಂಗ ಮಾಡುವುದಾಗಿ ಬೆದರಿಕೆ ಹಾಕಿ ಮತ್ತೆ ಮತ್ತೆ ದೈಹಿಕ ಸಂಪರ್ಕ ನಡೆಸಿ
ಆಕೆ ಗರ್ಭಿಣಿಯಾಗಲು ಕಾರಣನಾಗಿದ್ದಾನೆ
ಎಂದು ದೂರಿನಲ್ಲಿ ತಿಳಿಸಲಾಗಿದೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದ್ದು ಆರೋಪಿತನ ಪತ್ತೆಗೆ ಬಲೆ ಬೀಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!