ಹೊಸ ದಿಗಂತ ಡಿಜಿಟಲ್ ಡೆಸ್ಕ್:
ನೆನಪಿರಲಿ ಖ್ಯಾತಿಯ ನಟ ಪ್ರೇಮ್ ಅವರ ಮಗಳು ಅಮೃತ ಪ್ರೇಮ್ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ಡಾಲಿ ಪಿಕ್ಚರ್ಸ್ ನಿರ್ಮಾಣ ಸಂಸ್ಥೆ ಮೂಲಕ ಸಿನಿ ಕೆರಿಯರ್ ಶುರು ಮಾಡುತ್ತಿದ್ದಾರೆ.
ಡಾಲಿ ಪಿಕ್ಚರ್ಸ್ ನಿರ್ಮಾಣದಲ್ಲಿ ಮೂಡಿ ಬರ್ತಿರುವ ‘ಟಗರು ಪಲ್ಯ’ ಸಿನಿಮಾದಲ್ಲಿ ನಾಯಕಿ ನಟಿಯಾಗಿ ಅಭಿನಯಿಸಲು ಅಣಿಯಾಗುತ್ತಿದ್ದಾರೆ. ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ.
ಟಗರು ಪಲ್ಯ ಸಿನಿಮಾ ನಟಿ ಅಮೃತ ಪ್ರೇಮ್
ಟಗರು ಪಲ್ಯಕ್ಕಾಗಿ ಅಮೃತಾ ಲಂಗ ದಾವಣಿ ತೊಟ್ಟು ಕ್ಯಾಮೆರಾ ಕಣ್ಣುಗಳಲ್ಲಿ ಸೆರೆಯಾಗಿದ್ದಾರೆ. ನಿರ್ದೇಶಕ ಕೆ ಉಮೇಶ್ ಅವರು ಹಳ್ಳಿ ಹುಡುಗಿಯ ಶೈಲಿಯಲ್ಲಿ ಫೋಟೋ ಶೂಟ್ ಮಾಡಿಸಿದ್ದಾರೆ. ಅಮೃತ ಕೂಡ ಯಾವುದೇ ಟೆನ್ಶನ್ ಇಲ್ಲದೆ ಸಖತ್ ಕೂಲ್ ಆಗಿ ಕ್ಯಾಮೆರಾಗೆ ಪೋಸ್ ಕೊಡುತ್ತಿದ್ದರು. ಫೋಟೋಶೂಟ್ ಮೇಕಿಂಗ್ ಅನಾವರಣಗೊಂಡಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ನಿರ್ದೇಶಕ ಉಮೇಶ್.ಕೆ ಕೃಪ, ‘ಸಿನಿಮಾಗೆ ಫ್ರೆಶ್ ಫೇಸ್ ಹುಡುಕಾಟದಲ್ಲಿದ್ದೆವು. ಕಾರ್ಯಕ್ರಮವೊಂದರಲ್ಲಿ ಪ್ರೇಮ್ ಪುತ್ರಿ ಭೇಟಿಯಾದಾಗ ಈ ಸಿನಿಮಾ ಬಗ್ಗೆ ಹೇಳಿದೆ. ಕಥೆ ಕೇಳಿ ಹೇಳುತ್ತೇನೆ ಎಂದಿದ್ರು. ಅವರಿಗೂ ಈ ಕಥೆ ಇಷ್ಟವಾಯ್ತು. ಸಿನಿಮಾ ಮಾಡಲು ಒಪ್ಪಿಕೊಂಡ್ರು’ ಎಂದರು.
ಮಗಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿರುವ ಬಗ್ಗೆ ನೆನಪಿರಲಿ ಪ್ರೇಮ್ ಸಂತಸ ವ್ಯಕ್ತಪಡಿಸಿದ್ದಾರೆ. ‘ನಾನು ಒಬ್ಬ ನಟನಾಗಿ ಮಗಳು ಚಿತ್ರರಂಗಕ್ಕೆ ಬರುತ್ತಿರೋದು ಖುಷಿ ಇದೆ. ಆಕೆ ಓದುವುದರಲ್ಲೂ ಡಿಸ್ಟಿಂಕ್ಷನ್, ಈಗ ನಟಿಯಾಗಿ ಸಿನಿಮಾಗೂ ಬರುತ್ತಿದ್ದಾಳೆ. ಚಿತ್ರದ ಪಾತ್ರಕ್ಕಾಗಿ ಹಲವು ದಿನಗಳಿಂದ ಸಿದ್ಧತೆ ನಡೆಸುತ್ತಿದ್ದಾಳೆ ಎಂದು ಹೇಳಿದ್ದಾರೆ.