ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕೋಲ್ಕತ್ತಾ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಸಂಸದೆ ರಚನಾ ಬ್ಯಾನರ್ಜಿ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಸಿದ್ದು, ಸಂತ್ರಸ್ತೆಯ ಹೆಸರನ್ನು ಹೇಳುವ ಮೂಲಕ ವಿವಾದಕ್ಕೆ ಕಾರಣರಾಗಿದ್ದಾರೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕೋಲ್ಕತ್ತಾ ಹೈಕೋರ್ಟ್ ವಕೀಲ ಶಯಾನ್ ಸಚಿನ್ ಬಸು ಅವರು ರಚನಾ ಬ್ಯಾನರ್ಜಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ವಿಡಿಯೋದಲ್ಲಿ ಮೃತಳ ಹೆಸರನ್ನು ಹಲವು ಬಾರಿ ಉಲ್ಲೇಖಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಮೃತರ ಹೆಸರನ್ನು ಈ ರೀತಿ ಪುನರುಚ್ಚರಿಸುವುದು ಆಕೆಯ ಕುಟುಂಬದ ಸುರಕ್ಷತೆ ಮತ್ತು ಅವರ ಘನತೆಗೆ ಹೆಚ್ಚು ಅಪಾಯವನ್ನುಂಟುಮಾಡುತ್ತದೆ ಎಂದು ವಕೀಲರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಇದಾದ ಬಳಿಕ ಸಂಸದೆ ಕ್ಷಮೆಯಾಚಿಸಿದ್ದು, ಸಾಮಾಜಿಕ ಜಾಲತಾಣಗಳಿಂದ ವಿಡಿಯೋ ಡಿಲೀಟ್ ಮಾಡುವಂತೆ ಒತ್ತಾಯಿಸಿದ್ದಾರೆ.