ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಚಿವ ಮತ್ತು ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಿವಕುಮಾರ್ ಗೌತಮ್ ಗುಂಡಿನ ದಾಳಿ ಬಳಿಕ ಸಿದ್ದಿಕಿ ಸಾವನ್ನು ಖಚಿತಪಡಿಸಿಕೊಳ್ಳಲು ಅರ್ಧಗಂಟೆ ಕಾಲ ಆಸ್ಪತ್ರೆಯ ಹೊರಗೆ ಕಾದು ನಿಂತಿದ್ದ ಎಂದು ತನಿಖೆ ವೇಳೆ ತಿಳಿದು ಬಂದಿದೆ.
ಸಿದ್ದಿಕಿ ಮೇಲೆ ಗುಂಡಿನ ದಾಳಿ ನಡೆದ ಬಳಿಕ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ದಾಳಿ ನಡೆಸಿದ್ದ ಪ್ರಮುಖ ಆರೋಪಿ ತಾನೂ ಧರಿಸಿದ್ದ ಅಂಗಿಯನ್ನು ತಕ್ಷಣ ಬದಲಿಸಿಕೊಂಡು ಜನರ ಗುಂಪಿನಲ್ಲಿ ಸೇರಿಕೊಂಡಿದ್ದ. ಬಳಿಕ ಆಸ್ಪತ್ರೆಯ ಹೊರಗೆ 30 ನಿಮಿಷ ಕಾದು, ಸಿದ್ದಿಕಿ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದ ಬಳಿಕ ಅಲ್ಲಿಂದ ತೆರಳಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.