ಹೊಸದಿಗಂತ ಡಿಜಿಟಲ್ ಡೆಸ್ಕ್:
ಡೀಸೆಲ್ ದರ ಇಳಿಕೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಲಾರಿ ಮಾಲೀಕರು ಮುಷ್ಕರ ಆರಂಭಿಸಿದ್ದಾರೆ. ಮುಷ್ಕರ ಕೈಬಿಡುವಂತೆ ಲಾರಿ ಮಾಲೀಕರ ಸಂಘದೊಂದಿಗೆ ಸಿದ್ದರಾಮಯ್ಯ ಅವರು ನಡೆಸಿದ ಸಭೆ ವಿಫಲವಾಗಿದೆ.
ಮುಷ್ಕರ ನಿಲ್ಲಿಸುವಂತೆ ಹೇಳಿದರೂ ಲಾರಿ ಮಾಲೀಕರ ಸಂಘ ಒಪ್ಪದ ಹಿನ್ನೆಲೆಯಲ್ಲಿ ಸುದೀರ್ಘ ಒಂದೂವರೆ ಗಂಟೆ ನಡೆದ ಸಂಧಾನ ಸಭೆ ವಿಫಲವಾಗಿದೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಅವರು, ಮುಖ್ಯಮಂತ್ರಿಗಳ ಜೊತೆಗಿನ ಸಂಧಾನ ಸಭೆ ವಿಫಲವಾಗಿದೆ. ಯಾವುದೇ ಕಾರಣಕ್ಕೂ ಮುಷ್ಕರದಿಂದ ಹಿಂದೆ ಸರಿಯಲ್ಲ. ನಾವು ತೀರ್ಮಾನ ಮಾಡಿಯಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.