Wednesday, August 10, 2022

Latest Posts

ರಾಜ್ಯಕ್ಕೆ ಆಗಮಿಸಿದ ನೂತನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್: ನಾಳೆ ಪ್ರಮಾಣವಚನ ಸ್ವೀಕಾರ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ನಾಳೆ ಪ್ರಮಾಣವಚನ ಸ್ವೀಕರಿಸಲಿರುವ ಕರ್ನಾಟಕದ ನೂತನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬೆಂಗಳೂರಿಗೆ ಆಗಮಿಸಿದರು. ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಗೆಹ್ಲೋಟ್ ಅವರನ್ನು ರಾಜ್ಯ ಸರ್ಕಾರದ ಪರವಾಗಿ ಕಂದಾಯ ಸಚಿವ ಆರ್. ಅಶೋಕ್ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.
ತಮ್ಮ ಕುಟುಂಬಸ್ಥರೊಂದಿಗೆ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಗೆಹ್ಲೋಟ್ ಅವರನ್ನು ಕಂದಾಯ ಸಚಿವ ಆರ್. ಅಶೋಕ್ ಅವರೊಂದಿಗೆ ರಾಜ್ಯ ಸರ್ಕಾರದ ‌ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌, ರಾಜ್ಯ ಪೋಲಿಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸ್ವಾಗತಿಸಿದರು.
ಥಾವರ್ ಚಂದ್ ಗೆಹ್ಲೋಟ್ ಅವರು ವಿಮಾನ ನಿಲ್ದಾಣದಿಂದ ನೇರವಾಗಿ ರಾಜಭವನಕ್ಕೆ ತೆರಳಿದರು. ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಉನ್ನತ ಅಧಿಕಾರಗಳು ಹೂ ಗುಚ್ಛ ನೀಡಿ ಬರಮಾಡಿಕೊಂಡರು.
ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯದ 19ನೇ ರಾಜ್ಯಪಾಲರಾಗಿ ನಾಳೆ (ಜು.11) ಬೆಳಗ್ಗೆ 10.30ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣವಚನ ಬೋಧಿಸಲಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss