ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ನೂತನ ಕರ್ನಾಟಕ ಭವನ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಇದರ ಉದ್ಘಾಟನಾ ಸಮಾರಂಭವು ಬುಧವಾರ ಸಂಜೆ 6:30ಕ್ಕೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಅವರು ಈ ಭವ್ಯ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಉಪಸ್ಥಿತಿ ವಹಿಸಿದ್ದಲಿದ್ದು, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಿಸಿಎಂ ಡಿ.ಕೆ.ಶಿವಕುಮಾರ್, ಗೌರವ ಆಹ್ವಾನಿತರಾಗಿ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣ ಸ್ವಾಮಿ ಅವರನ್ನ ಆಹ್ವಾನಿಸಲಾಗಿದೆ.
ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ನಿರ್ಮಲಾ ಸೀತರಾಮನ್ ಅವರಿನ್ನೂ ಆಹ್ವಾನಿಸಿದೆ. ದೆಹಲಿ ವಿಶೇಷ ಪ್ರತಿನಿಧಿಗಳಾದ ಟಿ.ಬಿ.ಜಯಚಂದ್ರ, ಪ್ರಕಾಶ್ ಹುಕ್ಕೇರಿ ಕೂಡಾ ಭಾಗಿಯಾಗಲಿದ್ದಾರೆ.