ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಮೂರನೇ ದಿನ ಇಂದು ಸಾಹಿತ್ಯ ಸಮ್ಮೇಳನಕ್ಕೆ ತೆರೆ ಬೀಳಲಿದೆ.
88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ಆಯೋಜಿಸಲು ಶನಿವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ತು ಸಭೆಯಲ್ಲಿ ನಿರ್ಧರಿಸಲಾಗಿದೆ.
ಬಳ್ಳಾರಿ, ಕೋಲಾರ, ಯಾದಗಿರಿ ಸೇರಿದಂತೆ ಹೊಸ ಜಿಲ್ಲೆಗಳು ಸಾಹಿತ್ಯ ಸಮ್ಮೇಳನ ಆಯೋಜಿಸಲು ಅರ್ಜಿ ಸಲ್ಲಿಸಿವೆ. ಆದರೆ ಅಂತಿಮವಾಗಿ ಬಳ್ಳಾರಿ ಜಿಲ್ಲೆಯಲ್ಲಿ ಸಮ್ಮೇಳನ ನಡೆಸಲು ಎಲ್ಲ ಜಿಲ್ಲಾ ಸಮಿತಿಗಳು ನಿರ್ಧರಿಸಿವೆ.
66 ವರ್ಷಗಳ ನಂತರ ಬಳ್ಳಾರಿಯಲ್ಲಿ ಮತ್ತೊಮ್ಮೆ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಹಿಂದೆ 1926, 1938 ಮತ್ತು 1958ರಲ್ಲಿ ಸಾಹಿತ್ಯ ಸಮ್ಮೇಳನಗಳು ನಡೆದಿದ್ದವು.