ಹೊಸದಿಗಂತ ವರದಿ ಉಡುಪಿ:
ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ಇಲ್ಲ, ನಿಗದಿತ ಸಮಯದಲ್ಲಿ ಚುನಾವಣೆ ನಡೆಯಲಿದೆ. ಬಿಜೆಪಿ ಮತ್ತೊಮ್ಮೆ ಸರ್ಕಾರವನ್ನು ರಚನೆ ಮಾಡುತ್ತದೆ, ಬೊಮ್ಮಾಯಿ ಅವರ ನೇತೃತ್ವದಲ್ಲಿ ಚುನಾವಣೆಗೆ ಹೋಗುತ್ತೇವೆ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಕೂಡ ಬಸವರಾಜ್ ಬೊಮ್ಮಾಯಿಯಾಗಲಿದ್ದಾರೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದರು.
ಅವರು ಶನಿವಾರ ಉಡುಪಿಯ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು
ಬೊಮ್ಮಾಯಿಯವರು ಮುಂದಿನ ಚುನಾವಣೆಯ ನೇತೃತ್ವ ವಹಿಸುತ್ತಾರೆ ಎಂದು ಜೆಪಿ ನಡ್ಡ ಅವರೇ ಹೇಳಿದ್ದಾರೆ. ನಾವೆಲ್ಲರೂ ಅದಕ್ಕೆ ಸಹಮತ ವ್ಯಕ್ತಪಡಿಸಿದ್ದು, ನಮ್ಮಲ್ಲಿ ಗೊಂದಲ ಇಲ್ಲ. ನಾವು ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆಗೆ ಹೋಗುತ್ತೇವೆ, ನಮ್ಮ ಇವತ್ತಿನ ಕ್ಯಾಪ್ಟನ್ ಬಸವರಾಜ ಬೊಮ್ಮಾಯಿ. ಕ್ಯಾಪ್ಟನ್ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಹೋಗುತ್ತೇವೆ, ನವರಾತ್ರಿ ನಂತರ ಸಚಿವ ಸಂಪುಟ ವಿಸ್ತರಣೆ ಆಗುತ್ತದೆ ಎಂದರು.