ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡು ತಿಂಗಳಿನಿಂದ ಮೋಡ ಮುಸುಕಿದ ವಾತಾವರಣವಿದ್ದು, ಮುಂದಿನ ದಿನಗಳಲ್ಲಿ ಇದು ಮುಂದುವರಿಯಲಿದೆ.
ಮುಂದಿನ 5 ದಿನ ಕರಾವಳಿಯಲ್ಲಿ ವರುಣದೇವ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಗೆ ಮುಂದಿನ 5 ದಿನ ಭಾರಿ ಮಳೆಯ ಮುನ್ಸೂಚನೆ ನೀಡಿದ್ದು, ಮೂರು ದಿನ ಯಲ್ಲೋ ಅಲರ್ಟ್ ಘೋಷಿಸಿದೆ.
ಜುಲೈ 5 ಮತ್ತು 6ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರಿನಲ್ಲಿ ಮುಂದಿನ ಮೂರ್ನಾಲ್ಕು ದಿನ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಕೆಲವೊಮ್ಮೆ ಸಾಧಾರಣ ಮಳೆ ಸಾಧ್ಯತೆಯಿದ್ದು, ಗಾಳಿಯ ವೇಗ ಹೆಚ್ಚಾಗುವ ಸಂಭವವಿದೆ.