ಹೊಸದಿಗಂತ ಡಿಜಿಟಲ್ ಡೆಸ್ಕ್;
ವಿಜಯಪುರದ ರೈತರಿಗೆ ವಕ್ಫ್ ಬೋರ್ಡ್ ನೀಡಿರುವ ನೋಟಿಸ್ ಅನ್ನು ವಾಪಸ್ ಪಡೆಯುವಂತೆ ಸೂಚಿಸಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯ ರೈತರ ಜಮೀನುಗಳನ್ನು ವಕ್ಫ್ ಆಸ್ತಿ ಎಂದು ಗುರುತಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಸೋಮವಾರ ಅವರಿಗೆ ನೀಡಿದ್ದ ನೋಟಿಸ್ ಹಿಂಪಡೆಯುವುದಾಗಿ ತಿಳಿಸಿದ್ದಾರೆ.
ರೈತರ ಜಮೀನು ಕಬಳಿಕೆ ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ. ಬಿಜೆಪಿಯವರು ಅನಾವಶ್ಯಕವಾಗಿ ರಾಜಕೀಯ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ರಾಜಕೀಯ ಮಾಡೋದು ಸೂಕ್ತ ಅಲ್ಲ. ರೈತರಿಗೆ ನೋಟಿಸ್ ಹೋಗಿದ್ದರೆ ಅದನ್ನು ವಾಪಸ್ ಪಡೆಯುತ್ತೇವೆ . ಅಲ್ಲಿನ ತಹಶಿಲ್ದಾರ್ ತಪ್ಪು ಮಾಡಿದ್ದಾರೆ. ಹೀಗಾಗಿ ನೋಟಿಸ್ ವಾಪಸ್ ಪಡೆಯೋ ಕೆಲಸ ಮಾಡ್ತೀವಿ. ರಾಜಕೀಯವಾಗಿ ಆರೋಪ ಮಾಡೋದು ಸರಿಯಲ್ಲ ಎಂದು ಹೇಳಿದರು.