ಟ್ವಿಟರ್​​ನಲ್ಲಿ 9 ಕೋಟಿ ದಾಟಿದ ಪ್ರಧಾನಿ ಮೋದಿ ಫಾಲೋಯರ್​​ಗಳ ಸಂಖ್ಯೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಟ್ವಿಟರ್​​ನಲ್ಲಿ ಅತ್ಯಧಿಕ ಫಾಲೋವರ್ಸ್ ಹೊಂದಿರುವ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಪ್ರಧಾನಿ ಮೋದಿ ತಮ್ಮ ವೈಯಕ್ತಿಕ ಖಾತೆಯಲ್ಲಿ ಇ 90 ಮಿಲಿಯನ್​ ಅಂದರೆ 9 ಕೋಟಿಗೂ ಅಧಿಕ ಫಾಲೋವರ್ಸ್ ಹೊಂದಿದ್ದಾರೆ.ಆ ಮೂಲಕ ಟ್ವಿಟರ್​​ನ ಅತ್ಯಧಿಕ ಫಾಲೋವರ್ಸ್ ಹೊಂದಿರುವ ಖಾತೆಗಳ ಟಾಪ್​-10 ಪಟ್ಟಿಯಲ್ಲೂ ಅವರು ಸ್ಥಾನ ಹೊಂದಿದ್ದಾರೆ.

ಟ್ವಿಟರ್​ನ ಟಾಪ್​-10 ಅತ್ಯಧಿಕ ಫಾಲೋವರ್ಸ್ ಪಟ್ಟಿಯಲ್ಲಿ ಮೋದಿ ಎಂಟನೇ ಸ್ಥಾನದಲ್ಲಿದ್ದು, ಟಾಪ್​-10 ಪಟ್ಟಿಯಲ್ಲಿರುವ ಏಕೈಕ ಭಾರತೀಯ ಎಂದೆನಿಸಿಕೊಂಡಿದ್ದಾರೆ. ಮಾತ್ರವಲ್ಲ, ಟ್ವಿಟರ್​ನಲ್ಲಿ ಅತ್ಯಧಿಕ ಫಾಲೋವರ್ಸ್ ಹೊಂದಿರುವ ಭಾರತೀಯ ಕೂಡ ಅವರೇ ಆಗಿದ್ದಾರೆ.

ಟ್ವಿಟರ್ ಸಿಇಒ ಎಲಾನ್ ಮಸ್ಕ್ (Elon Musk) ಕೂಡಾ ಇವರನ್ನು ಫಾಲೋ ಮಾಡುತ್ತಿದ್ದಾರೆ. ಅತಿ ಹೆಚ್ಚು ಫಾಲೋಯರ್​​ಗಳನ್ನು ಹೊಂದಿರುವ ಮಸ್ಕ್ ಒಟ್ಟು 195 ವ್ಯಕ್ತಿಗಳನ್ನು ಫಾಲೋ ಮಾಡುತ್ತಾರೆ. ಏತನ್ಮಧ್ಯೆ, ಪ್ರಧಾನಿ ಮೋದಿ ಟ್ವಿಟರ್‌ನಲ್ಲಿ 2,589 ಜನರನ್ನು ಫಾಲೋ ಮಾಡುತ್ತಿದ್ದಾರೆ.

ಟ್ವಿಟರ್​ನಲ್ಲಿ ಅತ್ಯಧಿಕ ಫಾಲೋವರ್ಸ್ ಹೊಂದಿರುವವರ ಪೈಕಿ ಟ್ವಿಟರ್​ ಮುಖ್ಯಸ್ಥ ಎಲಾನ್ ಮಸ್ಕ್(14.7 ಕೋಟಿ ಫಾಲೋವರ್ಸ್) ಅಗ್ರಸ್ಥಾನದಲ್ಲಿದ್ದು, ಎರಡನೇ ಸ್ಥಾನದಲ್ಲಿ ಬರಾಕ್ ಒಬಾಮ (13.2 ಕೋಟಿ ಫಾಲೋವರ್ಸ್) ಇದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!