Wednesday, August 17, 2022

Latest Posts

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 9,55,015ಕ್ಕೆ ಏರಿಕೆ, 478 ಮಂದಿ ಗುಣಮುಖ

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಇಂದು 436 ಮಂದಿಯಲ್ಲಿ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,55,015ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 478 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,36,250ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಐದು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,367ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಸದ್ಯ 6,815 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 116 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!