ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚೆಗೆ ವೈದ್ಯಕೀಯ ಕ್ಷೇತ್ರದಲ್ಲಿ ಅತ್ಯಾಚಾರಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಬಿಹಾರದ ಖಾಸಗಿ ಆಸ್ಪತ್ರೆಯಲ್ಲಿ ಸಾಮೂಹಿಕ ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ನರ್ಸ್ ಒಬ್ಬರು ವೈದ್ಯನ ಖಾಸಗಿ ಅಂಗವನ್ನು ಬ್ಲೇಡ್ನಿಂದ ಕೊಯ್ದಿರುವ ಘಟನೆ ವರದಿಯಾಗಿದೆ.
ಬಿಹಾರದ ಖಾಸಗಿ ಆಸ್ಪತ್ರೆಯೊಂದರಲ್ಲಿ ನರ್ಸ್ ಮೇಲೆ ಸಾಮೂಹಿಕ ಅತ್ಯಾಚಾರ ಯತ್ನ ನಡೆದಿದೆ. ಅತ್ಯಾಚಾರ ಯತ್ನ ಮಾಡಿದವರಲ್ಲಿ ಒಬ್ಬರು ವೈದ್ಯರಾಗಿದ್ದು, ಸಂಸ್ಥೆಯ ನಿರ್ವಾಹಕರೂ ಆಗಿದ್ದಾರೆ, ನರ್ಸ್ ಅವರ ಖಾಸಗಿ ಭಾಗವನ್ನು ಬ್ಲೇಡ್ನಿಂದ ಕೊಯ್ದು ಅಲ್ಲಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾಳೆ.
ಮುಸ್ರಿಘರಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗಾಪುರದ ಆರ್ಬಿಎಸ್ ಹೆಲ್ತ್ ಕೇರ್ ಸೆಂಟರ್ನಲ್ಲಿ ಬುಧವಾರ ರಾತ್ರಿ ನರ್ಸ್ ಕೆಲಸ ಮುಗಿಸಿ ಮನೆಗೆ ಹೊರಡುತ್ತಿದ್ದಾಗ, ಆಡಳಿತಾಧಿಕಾರಿ ಡಾ. ಸಂಜಯ್ ಕುಮಾರ್ ಮತ್ತು ಇಬ್ಬರು ಮದ್ಯಪಾನ ಮಾಡಿ ಅತ್ಯಾಚಾರ ಮಾಡಲು ಯತ್ನಿಸಿದ್ದರು. ಸಂಜಯ್ ಹಾಗೂ ಇತರರ ಹಿಡಿತದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ನರ್ಸ್ ವೈದ್ಯನ ಗುಪ್ತಾಂಗಕ್ಕೆ ಬ್ಲೇಡ್ನಿಂದ ಸೀಳಿದ್ದಾರೆ. ಆಸ್ಪತ್ರೆಯ ಹೊರಗಿರುವ ಮೈದಾನದಲ್ಲಿ ಅಡಗಿ ನಂತರ ತಪ್ಪಿಸಿಕೊಂಡು ಪೊಲೀಸರಿಗೆ ಕರೆ ಮಾಡಿದ್ದರು.
ಪೊಲೀಸರ ತಂಡ ಆಸ್ಪತ್ರೆಗೆ ಆಗಮಿಸಿದ್ದು, ನರ್ಸ್ ಸುರಕ್ಷಿತವಾಗಿದ್ದಾರೆಂದು ತಿಳಿಸಿದ್ದಾರೆ. ವೈದ್ಯ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಇನ್ನಿಬ್ಬರು ಆರೋಪಿಗಳನ್ನು ಸುನಿಲ್ ಕುಮಾರ್ ಗುಪ್ತಾ ಹಾಗೂ ಅವಧೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.