ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ವರದಿ, ಸೋಮವಾರಪೇಟೆ:
ಸ್ನಾನ ಮಾಡುತ್ತಿದ್ದ ಸಂದರ್ಭ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಸಮೀಪದ ಶಾಂತಳ್ಳಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಶಾಂತಳ್ಳಿ ನಿವಾಸಿ ಧರ್ಮಪ್ಪ ಎಂಬವರೇ ಗಾಯಗೊಂಡವರು. ಶುಕ್ರವಾರ ರಾತ್ರಿ 8ಗಂಟೆ ಸುಮಾರಿಗೆ ಮನೆ ಹಿಂಭಾಗದ ಬಚ್ಚಲು ಮನೆಯಲ್ಲಿ ಸ್ನಾನ ಮಾಡುತ್ತಿದ್ದ ಸಂದರ್ಭ ಸಿಡಿಲು ಬದಿಡಿದ್ದರಿಂದ ಧರ್ಮಪ್ಪ ಅವರಿಗೆ ಸುಟ್ಟಗಾಯಗಳಾಗಿವೆ.
ತಕ್ಷಣ ಅವರನ್ನು ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ.
ಸಿಡಿಲು ಬಡಿತದಿಂದಾಗಿ ಮನೆ, ವಿದ್ಯುತ್ ತಂತಿಗಳಿಗೆ ಹಾನಿಯಾಗಿದ್ದು, ಕೊಟ್ಟಿಗೆಯಲ್ಲಿದ್ದ ಹಂದಿ ಮರಿಯೊಂದು ಸಾವನ್ನಪ್ಪಿದೆ. ಸ್ಥಳಕ್ಕೆ ಗ್ರಾ.ಪಂ. ಅಧ್ಯಕ್ಷೆ ಸವಿತಾ ವಿಜಯ, ಸದಸ್ಯ ಚಂಗಪ್ಪ, ತಾ.ಪಂ. ಮಾಜಿ ಅಧ್ಯಕ್ಷ ಕೆ.ಎಂ. ಲೋಕೇಶ್, ಕಂದಾಯ ಇಲಾಖಾ ಸಿಬ್ಬಂದಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ.