spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, January 28, 2022

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಅಮೆರಿಕ ತಲುಪಿದ ಒಮಿಕ್ರಾನ್ ರೂಪಾಂತರಿ

- Advertisement -Nitte

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೊರೋನಾ ರೂಪಾಂತರಿ ಒಮಿಕ್ರಾನ್ ಇಡೀ ವಿಶ್ವದ ನಿದ್ದೆಗೆಡಿಸಿದ್ದು, ಇದೀಗ ಅಮೆರಿಕಕ್ಕೆ ಕಾಲಿಟ್ಟಿದೆ.
ಯುನೈಟೆಡ್ ಸ್ಟೇಟ್ಸ್‌ನಲ್ಲಿ ಒಮಿಕ್ರಾನ್ ರೂಪಾಂತರಿ ಮೊದಲ ಪ್ರಕರಣ ದಾಖಲಾಗಿದೆ.

ಕ್ಯಾಲಿಫೋರ್ನಿಯಾದ ವ್ಯಕ್ತಿಯೊಬ್ಬರು ದಕ್ಷಿಣ ಆಫ್ರಿಕಾಕ್ಕೆ ಪ್ರಯಾಣಿಸಿದ್ದು, ಸೋಂಕು ಕಾಣಿಸಿದೆ.
ಸೌಮ್ಯವಾದ ರೋಗಲಕ್ಷಣಗಳನ್ನು ಸೋಂಕಿತ ಹೊಂದಿದ್ದು, ನ.22 ರಂದು ದಕ್ಷಿಣ ಆಫ್ರಿಕಾದಿಂದ ಯುನೈಟೆಡ್ ಸ್ಟೇಟ್ಸ್‌ಗೆ ಮರಳಿದ್ದರು ಎನ್ನಲಾಗಿದೆ. ದ.ಆಫ್ರಿಕಾದಿಂದ ಬಂದ ಏಳು ದಿನದ ನಂತರ ಪರೀಕ್ಷೆ ಮಾಡಿಸಿದ್ದು, ಪಾಸಿಟಿವ್ ಬಂದಿದೆ. ಅಲ್ಲದೇ ಈ ವ್ಯಕ್ತಿ ಈಗಾಗಲೇ ಎರಡು ಡೋಸ್ ಲಸಿಕೆ ಪಡೆದಿದ್ದರು ಎಂದು ಸಾರ್ವಜನಿಕ ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಯುರೋಪ್ ಮತ್ತು ಕೆನಡಾ, ಆಸ್ಟ್ರೇಲಿಯಾ, ಜಪಾನ್, ಹಾಂಗ್‌ಕಾಂಗ್, ಇಸ್ರೇಲ್ ಸೇರಿದಂತೆ ಇತರೆ 12 ದೇಶಗಳಲ್ಲಿಯೂ ಒಮಿಕ್ರಾನ್ ಸೋಂಕು ಕಾಣಿಸಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img

Don't Miss