ನೋಡುಗರ ಗಮನ ಸೆಳೆಯುತ್ತಿದೆ ಶ್ರೀಕೃಷ್ಣ ದೇವರಾಯರ ಪುತ್ಥಳಿ

ಹೊಸ ದಿಗಂತ ವರದಿ, ವಿಜಯನಗರ:

ನಗರದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಶನಿವಾರ ಪ್ರಾರಂಭಗೊಂಡಿದ್ದು, ವೇದಿಕೆ ಮುಖ್ಯದ್ವಾರದ ಬಳಿ ನಿರ್ಮಿಸಿದ ಶ್ರೀ ಮಹರ್ಷಿ ವಾಲ್ಮೀಕಿ ಪ್ರದರ್ಶಿನಿಯಲ್ಲಿ ವಿಜಯನಗರ ಸಾಮ್ರಾಜ್ಯದ ಒಡೆಯ ಶ್ರೀಕೃಷ್ಣ ದೇವರಾಯ ಅವರ ಪುತ್ಥಳಿಯನ್ನು ಪ್ರತಿಷ್ಠಾಪಿಸಿದ್ದು, ನೋಡುಗರ ಗಮನ ಸೆಳೆಯುತ್ತಿದೆ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಜೀ ಅವರೊಂದಿಗೆ ಅನೇಕ ಗಣ್ಯರು ವೀಕ್ಷಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಜೀ, ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ.ಟಿ.ರವಿ, ರಾಜ್ಯ ಸಹ ಉಸ್ತುವಾರಿ ಕೆ.ಅರುಣಾ, ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಸಚಿವರಾದ ಆನಂದ್ ಸಿಂಗ್, ಶಶಿಕಲಾ ಜೊಲ್ಲೆ, ಸುನೀಲ್ ಕುಮಾರ್ ಸಂಸದ ವೈ.ದೇವೇಂದ್ರಪ್ಪ, ಸಫಾಯಿ ಕರ್ಮಚಾರಿ ಅಭಿವೃದ್ಧಿ ‌ನಿಗಮದ ಅಧ್ಯಕ್ಷ ಎಚ್.ಹನುಮಂತಪ್ಪ, ಜಿಲ್ಲಾಧ್ಯಕ್ಷ ಚೆನ್ನಬಸವನಗೌಡ ಪಾಟೀಲ್, ರಾಜ್ಯ ಪ್ರದಾನ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ, ಸೇರಿದಂತೆ ಇತರರಿದ್ದರು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!