ಇದಕ್ಕೆ ಅಲ್ವಾ ಹೇಳೋದು ಬೊಗಳುವ ನಾಯಿ ಯಾವತ್ತೂ ಕಚ್ಚಲ್ಲ ಅಂತ.. ಪಾಕ್ ಯುಟರ್ನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಹಲ್ಗಾಮ್​ ಉಗ್ರರ ದಾಳಿ ಬೆನ್ನಲ್ಲೇ ಭಾರತ ಹಾಗೂ ಪಾಕಿಸ್ತಾನ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಭಾರತ ಯಾವ ಸಂದರ್ಭದಲ್ಲಿ ಬೇಕಾದರೂ ಪಾಕಿಸ್ತಾನದ ವಿರುದ್ಧ ದಿಟ್ಟ ನಿರ್ಧಾರ ಕೈಗೊಳ್ಳಬಹುದು ಎನ್ನಲಾಗಿತ್ತು. ಅದರಂತೆ ಮಂಗಳವಾರ ತಡರಾತ್ರಿ ಭಾರತೀಯ ಸೇನೆ ಪಾಕಿಸ್ತಾನಕ್ಕೆ ನುಗ್ಗಿ ಉಗ್ರರ ನೆಲೆಗಳ ಮೇಲೆ ದಾಳಿ ಮಾಡುವಲ್ಲಿ ಯಶಸ್ವಿಯಾಗಿದೆ.

ಆಪರೇಷನ್ ಸಿಂಧೂರ್ ​ ಬೆನ್ನಲ್ಲೇ ಪಾಕಿಸ್ತಾನ ನಡುಗಿದೆ. ಇದಕ್ಕೆ ಪೂರಕವೆಂಬಂತೆ ಭಾರತ ದಾಳಿ ನಿಲ್ಲಿಸಿದರೆ ಉದ್ವಿಗ್ನತೆ ಶಮನಕ್ಕೆ ಸಿದ್ಧ ಎಂದು ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್ ಶಾಂತಿ ಪಠಣ ಮಾಡಿದ್ದಾರೆ. ಈ ಮೂಲಕ ಆಸಿಫ್​ ಯುಟರ್ನ್​ ಹೊಡೆದಿದ್ದಾರೆ.

ಭಾರತ ಉಗ್ರರ ನೆಲೆ ಗುರಿಯಾಗಿಸಿ ಏರ್​ಸ್ಟ್ರೈಕ್​ ಮಾಡಿದ ನಂತರ ಪಾಕಿಸ್ತಾನ ರಕ್ಷಣಾ ಸಚಿವ ಆಸಿಫ್​ ಪ್ರತಿಕ್ರಿಯಿಸಿದ್ದು, ಭಾರದ ದಾಳಿ ಮಾಡಿದರೆ ಮಾತ್ರ ಪಾಕಿಸ್ತಾನ ಪ್ರತಿಕ್ರಿಯಿಸುತ್ತದೆ. ಕಳೆದ ಹದಿನೈದು ದಿನಗಳಿಂದ ನಾವು ಭಾರತದ ವಿರುದ್ಧ ಯಾವುದೇ ಬಗೆಯ ಕ್ರಮಕೈಗೊಳ್ಳುವಿದಲ್ಲ ಎಂದು ಹೇಳುತ್ತಿದ್ದೇವೆ. ಆದರೆ ನಮ್ಮ ಮೇಲೆ ದಾಳಿ ನಡೆದರೆ, ನಾವು ಪ್ರತಿದಾಳಿ ಮಾಡುತ್ತೇವೆ. ಇನ್ನು ಒಂದು ವೇಳೆ ಭಾರತ ಹಿಂದೆ ಸರಿದರೆ ನಾವು ಸಹ ಖಂಡಿತವಾಗಿಯೂ ಈ ಉದ್ವಿಗ್ಬತೆಯನ್ನು ಶಮನಗೊಳಿಸುತ್ತೇವೆ ಎಂದು ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!