ಕೇಂದ್ರ ಬಿಜೆಪಿ ವಿರುದ್ಧ ವಿಪಕ್ಷಗಳಿಗೆ ಸಿಕ್ಕಿತು ಮತ್ತಷ್ಟು ಬಲ: ಮಹಾ ಮೈತ್ರಿಗೆ ಜೊತೆಯಾದ ಎಂಟು ಹೊಸ ಪಕ್ಷಗಳು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೇಂದ್ರ ಸರಕಾರದ ವಿರುದ್ಧ ಒಂದಾದ ವಿಪಕ್ಷಗಳಿಗೆ ಮತ್ತಷ್ಟು ಬಲ ಬಂದಿದ್ದು, ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಪಕ್ಷಗಳ ಸಭೆಗೆ ಸೇರಲು ಎಂಟು ಹೊಸ ಪಕ್ಷಗಳು ಮುಂದೆ ಬಂದಿವೆ.

ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ (MDMK), ಕೊಂಗುನಾಡು ಮಕ್ಕಳ್ ದೇಶಿಯ ಕಚ್ಚಿ (KMDK), ವಿದುತಲೈ ಚಿರುತೈಗಲ್ ಕಚ್ಚಿ (VCK), ಕ್ರಾಂತಿಕಾರಿ ಸಮಾಜವಾದಿ ಪಕ್ಷ (RSP), ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್ (AIFB), ಕೇರಳ ಕಾಂಗ್ರೆಸ್ (ಜೋಸೆಫ್), ಕೇರಳ ಕಾಂಗ್ರೆಸ್ (ಮಣಿ), ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಪಕ್ಷಗಳು ಬಿಜೆಪಿಯೇತರ ಮೈತ್ರಿಗೆ ತಮ್ಮ ಬೆಂಬಲವನ್ನು ನೀಡಿವೆ.

ವೈಕೋ ನೇತೃತ್ವದ ಎಂಡಿಎಂಕೆ ಮತ್ತು ಇಆರ್ ಈಶ್ವರನ್ ನೇತೃತ್ವದ ಕೆಎಂಡಿಕೆ 2014 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮಿತ್ರಪಕ್ಷಗಳಾಗಿದ್ದವು.

ಮುಂದಿನ ವರ್ಷದ ಸಾರ್ವತ್ರಿಕ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯನ್ನು ಒಗ್ಗಟ್ಟಿನಿಂದ ಎದುರಿಸಲು ಸಾಮಾನ್ಯ ಕಾರ್ಯತಂತ್ರವನ್ನು ರೂಪಿಸಲು ವಿರೋಧ ಪಕ್ಷಗಳ ನಾಯಕರು ಜೂನ್ 23 ರಂದು ಪಾಟ್ನಾದಲ್ಲಿ ಮೊದಲ ಸಭೆ ನಡೆಸಿದ್ದರು.ಇದೀಗ ಜುಲೈ 17-18 ರಂದು ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ 2ನೇ ಸುತ್ತಿನ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಜನತಾ ದಳ (ಯುನೈಟೆಡ್), ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಸಿಪಿಎಂ, ಸಿಪಿಐ, ಸಿಪಿಐ-ಎಂಎಲ್, ಆರ್‌ಜೆಡಿ, ಜೆಡಿಯು, ಜೆಕೆಪಿಡಿಪಿ, ಜೆಕೆಎನ್‌ಸಿ, ಡಿಎಂಕೆ, ಎನ್‌ಸಿಪಿ, ಶಿವಸೇನೆ (ಯುಬಿಟಿ), ಎಸ್‌ಪಿ, ಎಎಪಿ ಮತ್ತು ಜೆಎಂಎಂ ಸೇರಿದಂತೆ ಒಟ್ಟು 15 ಪಕ್ಷಗಳು ಸಭೆಯಲ್ಲಿ ಭಾಗವಹಿಸಿದ್ದವು. ಇದೀಗ ಇನ್ನೂ ಎಂಟು ಪಕ್ಷಗಳು ವಿಬೆಂಬಲ ಸೂಚಿಸಿವೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here