ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡುವ ವೇಳೆ ವಿರೋಧ ಪಕ್ಷಗಳ ಸದಸ್ಯರು ಸಭಾತ್ಯಾಗ ಮಾಡಿದರು.
ಭಾಷಣದಲ್ಲಿ ಕಾಂಗ್ರೆಸ್ ಹಾಗೂ ಇಂಡಿಯಾ ಮೈತ್ರಿಕೂಟದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ , ‘ದೇಶದ ಜನರು ನಮ್ಮ ಸರ್ಕಾರದ ಮೇಲೆ ನಂಬಿಕೆಯನ್ನು ಮತ್ತೆ ಮತ್ತೆ ತೋರಿಸಿದ್ದಾರೆ. ದೇಶದ ಕೋಟ್ಯಂತರ ಜನರಿಗೆ ಕೃತಜ್ಞತೆ ಸಲ್ಲಿಸಲು ನಾನು ಇಲ್ಲಿದ್ದೇನೆ ಎಂದು ಹೇಳಿದರು.
‘ಜನರ ಆಶೀರ್ವಾದದೊಂದಿಗೆ ಹಿಂದಿನ ಎಲ್ಲ ದಾಖಲೆಗಳನ್ನು ಮುರಿದು ಎನ್‌ಡಿಎ ಮತ್ತು ಬಿಜೆಪಿಯನ್ನು ಮಹಾ ವಿಜಯದ ಮೂಲಕ ಮರಳಿ ಅಧಿಕಾರಕ್ಕೆ ತರಲು ನೀವು ನಿರ್ಧರಿಸಿರುವುದನ್ನು ನಾನು ಇಂದು ನೋಡುತ್ತಿದ್ದೇನೆ ಎಂದು ಪ್ರಧಾನಿ ಹೇಳಿದರು.
#WATCH | Opposition MPs walk out of the Lok Sabha as Prime Minister Narendra Modi speaks on #NoConfidenceMotion pic.twitter.com/2kYKRBiP1Z
— ANI (@ANI) August 10, 2023