ಹೊಸದಿಗಂತ ಡಿಜಿಟಲ್ ಡೆಸ್ಕ್:
‘ಸು ಫ್ರಮ್ ಸೋ’ ಸಿನಿಮಾ ಥಿಯೇಟರ್ನಲ್ಲಿ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ಈ ಸಿನಿಮಾ 100 ಕೋಟಿ ರೂಪಾಯಿಗೂ ಅಧಿಕ ಗಳಿಕೆ ಮಾಡಿದೆ. ಈಗ ಈ ಚಿತ್ರ ಸೆಪ್ಟೆಂಬರ್ 5ರಂದು ಒಟಿಟಿಗೆ ಬರಲಿದೆ ಎಂದು ವರದಿ ಆಗಿತ್ತು.
ಆದರೆ, ಆ ರೀತಿ ಆಗಲೇ ಇಲ್ಲ. ಸಿನಿಮಾ ಸದ್ಯ (ಸೆಪ್ಟೆಂಬರ್ 5 ಬೆಳಿಗ್ಗೆ 7 ಗಂಟೆ) ಒಟಿಟಿಗೆ ಇನ್ನೂ ಕಾಲಿಟ್ಟಿಲ್ಲ. ಜಿಯೋ ಹಾಟ್ಸ್ಟಾರ್ ಕಡೆಯಿಂದ ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ. ಹೀಗಾಗಿ, ಸಿನಿಮಾ ರಿಲೀಸ್ ಮತ್ತಷ್ಟು ವಿಳಂಬ ಆಗಿರಬಹುದು ಎಂದು ಅನೇಕರು ಊಹಿಸಿದ್ದಾರೆ.
ಇನ್ನೂ ಕೆಲವು ವರದಿಗಳು ಸೆಪ್ಟೆಂಬರ್ 8ರಂದು ‘ಸು ಫ್ರಮ್ ಸೋ’ ಒಟಿಟಿಗೆ ಬರಲಿದೆ ಎಂದು ಹೇಳುತ್ತಿವೆ. ಆದರೆ, ಜಿಯೋ ಹಾಟ್ಸ್ಟಾರ್ ಕಡೆಯಿಂದ ಈ ಬಗ್ಗೆ ಅಧಿಕೃತ ಘೋಷಣೆ ಆದ ಬಳಿಕವೇ ಈ ವಿಚಾರ ತಿಳಿಯಬೇಕಿದೆ.
CINE | ಕಡೆಗೂ ಅನೌನ್ಸ್ ಆಯ್ತು ‘ಸು ಫ್ರಮ್ ಸೋ’ ಒಟಿಟಿ ರಿಲೀಸ್ ಡೇಟ್!
