ಹಾಡಹಗಲೇ ಮನೆ ಮಾಲಕನ್ನು ಕಟ್ಟಿಹಾಕಿ ದರೋಡೆ

ಹೊಸದಿಗಂತ ವರದಿ,ಮಡಿಕೇರಿ:

ಹಾಡಹಗಲೇ ಮನೆ ಮಾಲಕನ್ನು ಕಟ್ಟಿ ಹಾಕಿ ನಗದು ಹಾಗೂ ಚಿನ್ನಾಭರಣ ದೋಚಿರುವ ಘಟನೆ ಸಿದ್ದಾಪುರ ಸಮೀಪದ‌ ಅವರೆಗುಂದ ಗ್ರಾಮದಲ್ಲಿ ನಡೆದಿದೆ.
ವೀರಾಜಪೇಟೆ ತಾಲೂಕಿನ ಸಿದ್ದಾಪುರ ಠಾಣಾ ವ್ಯಾಪ್ತಿಯ ಅವರೆಗುಂದ ಗ್ರಾಮದ ಮಂಡೇಪಂಡ ಚಂಗಪ್ಪ ಎಂಬವರು ಮನೆಯಲ್ಲಿ ಒಬ್ಬಂಟಿಯಾಗಿದ್ದ ಸಂದರ್ಭ ನಾಲ್ವರು ಅಪರಿಚಿತ ವ್ಯಕ್ತಿಗಳು ಮನೆಯೊಳಗೆ ನುಗ್ಗಿದ್ದು, ಚಂಗಪ್ಪ ಅವರ ಕುತ್ತಿಗೆಗೆ ಕತ್ತಿ ಇಟ್ಟು ಬೆದರಿಕೆ ಹಾಕಿದರೆನ್ನಲಾಗಿದೆ.
ಬಳಿಕ ಮನೆಯಲ್ಲಿದ್ದ ನಗದು ಹಾಗೂ ಚಿನ್ನಾಭರಣ ದೋಚಿದ ದುಷ್ಕರ್ಮಿಗಳು ಮನೆ ಮಾಲಕನ ಬಾಯಿಗೆ ಬಟ್ಟೆ ತುರುಕಿ, ಕೈ ಕಾಲು ಕಟ್ಟಿ ಮನೆಯ ಸಮೀಪದಲ್ಲಿದ್ದ ತೋಡಿಗೆ ಎಸೆದು ಪರಾರಿಯಾಗಿರುವುದಾಗಿ ಹೇಳಲಾಗಿದೆ.
ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ. ಎ.ಅಯ್ಯಪ್ಪ ಭೇಟಿ ನೀಡಿ ಪರಿಶೀಲಿಸಿದ್ದು, ಆರೋಪಿಗಳ ಪತ್ತೆಗೆ ತಂಡ ರಚಿಸಿದ್ದಾರೆ. ಶ್ವಾನದಳ, ಬೆರಳಚ್ಚು ತಂಡದಿಂದಲೂ ಪರಿಶೀಲನೆ ನಡೆಸಿದ್ದು, ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!