ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಡೇಟಿಂಗ್‌ನಲ್ಲಿದ್ದಾರೆ ಎಂದೇ ಫ್ಯಾನ್ಸ್ ನಂಬಿದ್ದಾರೆ. ಇದೀಗ ಇಬ್ಬರೂ ಮಾಲ್ಡೀವ್ಸ್‌ನಲ್ಲಿ ಇದ್ದಾರೆ ಎನ್ನಲಾಗಿದೆ. ರಶ್ಮಿಕಾ ಹಾಗೂ ವಿಜಯ್ ಏರ್‌ಪೋರ್ಟ್‌ನಲ್ಲಿ ಕ್ಯಾಮರಾ ಕಣ್ಣಿಗೆ ಸಿಲುಕಿದ್ದು, ಇಬ್ಬರು ಡೇಟಿಂಗ್ ಮಾಡ್ತಿದ್ದಾರೆ ಅನ್ನೋದಕ್ಕೆ ಇದು ಇನ್ನೊಂದು ಸಾಕ್ಷಿ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.
ಏರ್‌ಪೋರ್ಟ್‌ನಲ್ಲಿ ವಿಜಯ್ ಹಾಕಿದ್ದ ಗಾಗಲ್ಸ್ ಮಾಲ್ಡೀವ್ಸ್‌ನಲ್ಲಿ ರಶ್ಮಿಕಾ ಹಾಕಿದ್ದಾರೆ. ರಶ್ಮಿಕಾ ಪೋಸ್ಟ್ ಮಾಡಿರುವ ಫೋಟೊದಲ್ಲಿ ವಿಜಯ್ ಗಾಗಲ್ಸ್ ಕಾಣುತ್ತಿದೆ ಎಂದು ಅಭಿಮಾನಿಗಳು ಖುಷಿ ಪಟ್ಟಿದ್ದಾರೆ.