Monday, August 15, 2022

Latest Posts

ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ವಿವಸ್ತ್ರಗೊಳಿಸಿ, ಶೂ ಹಾರ ಹಾಕಿ ಮೆರವಣಿಗೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ವಿವಾಹಿತ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆಂದು ಮಹಿಳೆಯನ್ನು ವಿವಸ್ತ್ರಗೊಳಿಸಿ, ಕುತ್ತಿಗೆಗೆ ಶೂ ಹಾರ ಹಾಕಿ ಮೆರವಣಿಗೆ ಮಾಡಲಾಗಿದೆ.
ಜಾರ್ಖಂಡ್ ರಾಜ್ಯದ ದುಮ್ಕಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ.
ವಿವಾಹಿತ ಮಹಿಳೆ ಬೇರೊಬ್ಬ ವಿವಾಹಿತ ವ್ಯಕ್ತಿಯೊಂದಿಗೆ ಪರಾರಿಯಾಗುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ವ್ಯಕ್ತಿಯ ಪತ್ನಿ ಕಡೆಯವರು ಮಹಿಳೆಗೆ ಥಳಿಸಿದ್ದಾರೆ. ನಂತರ ವಿವಸ್ತ್ರಗೊಳಿಸಿ, ಶೂ ಹಾರ ಹಾಕಿ ಹಳ್ಳಿಯಲ್ಲಿ ಮೆರವಣಿಗೆ ಮಾಡಿದ್ದಾರೆ.
ಈ ಪ್ರಕರಣದಲ್ಲಿ ಪರಾರಿಯಾಗುತ್ತಿದ್ದ ವ್ಯಕ್ತಿ, ಆತನ ಪತ್ನಿ ಸೇರಿ ಆರು ಮಂದಿ ಬಂಧನವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss