ಹತ್ಯೆಗೂ ಮುನ್ನ ಪಾರ್ಟಿ: ರೆಸ್ಟೋರೆಂಟ್​ನಲ್ಲಿ ಸ್ಥಳ ಮಹಜರು, ನಟ ಚಿಕ್ಕಣ್ಣ ಹಾಜರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್​ ಮತ್ತು ಅವರ ಸ್ನೇಹಿತೆ ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳು ಸದ್ಯ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.

ವಿಚಾರಣೆ ವೇಳೆ ದರ್ಶನ್ ಮತ್ತು ಗ್ಯಾಂಗ್ ರೇಣುಕಸ್ವಾಮಿ ಹತ್ಯೆ ನಡೆಯುವ ರಾತ್ರಿ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಬಾರ್​ ಅಂಡ್​ ರೆಸ್ಟೋರೆಂಟ್​ನಲ್ಲಿ ಪಾರ್ಟಿ ಮಾಡಿದ್ದರು ಎಂದು ಬಾಯಿ ಬಿಟ್ಟಿದ್ದಾರೆ.

ಹೀಗಾಗಿ ಪೊಲೀಸರು ನಟ ದರ್ಶನ್​ ಸಹಿತ ನಾಲ್ವರನ್ನು ರೆಸ್ಟೋರೆಂಟ್​ ಗೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ. ಜೊತೆಗೆ ನಟ ಚಿಕ್ಕಣ್ಣನನ್ನು ಕೂಡ ಪೊಲೀಸರು ಕರೆಸಿದ್ದಾರೆ.

ರಾಜರಾಜೇಶ್ವರಿ ನಗರದಲ್ಲಿರುವ ಬಾರ್​ ಅಂಡ್​ ರೆಸ್ಟೋರೆಂಟ್​ನಲ್ಲಿ ನಡೆದ ಪಾರ್ಟಿ ನಲ್ಲಿ ನಟ ಚಿಕ್ಕಣ್ಣ ಕೂಡ ಭಾಗಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!