ವಿಮಾನ ಹೈಜಾಕ್ ಆಗಿದೆ ಎಂದು ಟ್ವೀಟ್ ಮಾಡಿ ಜೈಲಿಗೆ ಹೋದ ಪ್ರಯಾಣಿಕ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದುಬೈಯಿಂದ ಭಾರತಕ್ಕೆ ತೆರಳುತ್ತಿದ್ದ ಸ್ಪೈಸ್ ಜೆಟ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನೊಬ್ಬ ವಿಮಾನ ಹೈಜಾಕ್ ಆಗಿದೆ ಎಂದು ಟ್ವೀಟ್ ಮಾಡಿ ಜೈಲಿಗೆ ಹೋಗಿದ್ದಾನೆ!

ವಿಮಾನ ವಿಳಂಬದಿಂದ ಅಸಮಧಾನಗೊಂಡಿದ್ದ ಮೋತಿ ಸಿಂಗ್ ರಾಥೋಡ್ ಈ ರೀತಿ ಟ್ವೀಟ್ ಮಾಡಿದ್ದಾರೆ. ದುಬೈನಿಂದ ಜೈಪುರಕ್ಕೆ ಮೋತಿ ಸಿಂಗ್ ಪ್ರಯಾಣಿಸುತ್ತಿದ್ದರು. ಆದರೆ ಹವಾಮಾನ ವೈಪರೀತ್ಯದಿಂದಾಗಿ ವಿಮಾನ ದೆಹಲಿಯತ್ತ ಹೊರಟಿತ್ತು.

 

ಎಸ್ ಜಿ 58 ವಿಮಾನದ ಮೂಲಕ ದೆಹಲಿ ವಿಮಾನಕ್ಕೆ ಬಂದಿಳಿದಿದ್ದು, ಎಲ್ಲ ಕ್ಲಿಯರೆನ್ಸ್ ನಂತರ ಮತ್ತೆ ಜೈಪುರ್‌ಗೆ ತೆರಳಬೇಕಿತ್ತು. ಈ ಮಧ್ಯೆ ವಿಮಾನ ಹೈಜಾಕ್ ಆಗಿದೆ ಎಂದು ಟ್ವೀಟ್ ಮಾಡಿ, ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಟ್ಯಾಗ್ ಮಾಡಿದ್ದಾರೆ.

ಇದರ ಜೊತೆಗೆ ಸಿಬ್ಬಂದಿ ಜತೆ ಪ್ರಯಾಣಿಕರು ಜಗಳ ಆಡುತ್ತಿರುವ ವಿಡಿಯೋ ಕೂಡ ಪೋಸ್ಟ್ ಮಾಡಿದ್ದಾರೆ. ಸ್ವಲ್ಪ ಸಮಯದಲ್ಲಿ ತಪ್ಪಿನ ಅರಿವಾಗಿದ್ದು, ಟ್ವಿಟರ್‌ನಲ್ಲಿ ಕ್ಷಮೆ ಕೋರಿದ್ದಾರೆ. ಇಂಗ್ಲಿಷ್ ಕೊರತೆಯಿಂದ ತಪ್ಪು ಬರೆದಿದ್ದೇನೆ ಎಂದು ಹೇಳಿದ್ದಾರೆ. ಮುಂದಿನ ಕ್ರಮಕ್ಕಾಗಿ ಮೋತಿ ಸಿಂಗ್‌ನ್ನು ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!