ಕಾಡಾನೆ-ಚಿರತೆ ಕಾಟಕ್ಕೆ ಹೈರಾಣಾದ ಬೆಳ್ತಂಗಡಿಯ ಜನತೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಕಳೆದ ಒಂದು ವಾರದಿಂದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಕೊಂಚ ಕಡಿಮೆಯಾಗಿದ್ದ ಕಾಡಾನೆ ಕಾಟ ಮತ್ತೆ ಆರಂಭವಾಗಿದೆ.

ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಮಾಕಳ ರಾಮಣ್ಣ ಗೌಡ ಎಂಬವರ ತೋಟಕ್ಕೆ ಶುಕ್ರವಾರ ತಡರಾತ್ರಿ ದಾಳಿ ಇಟ್ಟ ಕಾಡಾನೆಗಳು 50 ಬಾಳೆಗಿಡ,ಎರಡು ತೆಂಗಿನ ಮರ,ಅಡಕೆ ಮರಗಳನ್ನು ಧ್ವಂಸಗೊಳಿಸಿವೆ.

ಮನೆಯಿಂದ ಅನತಿ ದೂರದ ಅಂಗಳದಲ್ಲಿ ಒಣಗಲು ಹಾಕಿದ ಅಡಕೆಗೆ ಆನೆಗಳು ತುಳಿದಿದ್ದು ನಷ್ಟ ಉಂಟಾಗಿದೆ.ಗುಂಪಿನಲ್ಲಿ ಎರಡು ಆನೆಗಳಿದ್ದು ಒಂದು ಸಣ್ಣ ಆನೆ ಹಾಗೂ ಇನ್ನೊಂದು ದೊಡ್ಡ ಆನೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ

ತೋಟತ್ತಾಡಿಯಲ್ಲಿ ಚಿರತೆ ದಾಳಿ
ಕಾಡಾನೆಗಳು ಕಂಡು ಬಂದ ಪ್ರದೇಶದಿಂದ 3 ಕಿಮೀ ದೂರದಲ್ಲಿರುವ ತೋಟತ್ತಾಡಿ ಗ್ರಾಮದ ಕುಂಟಾಡಿ ಎಂಬಲ್ಲಿ ಸಾಕು ನಾಯಿಯ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ನಡೆದಿದೆ.

ವಿಜು ಅವರ ಮನೆಯಲ್ಲಿ ಒಟ್ಟು ಮೂರು ಸಾಕು ನಾಯಿಗಳಿದ್ದು ಚಿರತೆ ಒಂದು ನಾಯಿಯ ಮೇಲೆ ದಾಳಿ ನಡೆಸಿದಾಗ ಉಳಿದ ಎರಡು ನಾಯಿಗಳು ಚಿರತೆಯ ಮೇಲೆ ದಾಳಿ ಮಾಡಿದ್ದು ಈ ಸಮಯ ಚಿರತೆ ಸ್ಥಳದಿಂದ ಓಡಿಹೋಗಿದೆ.

ಚಿರತೆ ದಾಳಿಗೆ ತುತ್ತಾದ ನಾಯಿ ಜೀವನ್ಮರಣ ಪರಿಸ್ಥಿತಿಯಲ್ಲಿದೆ.ಸ್ಥಳಕ್ಕೆ ಡಿ ಆರ್ ಎಫ್ ಒ ಭವಾನಿ ಶಂಕರ್, ಸಿಬ್ಬಂದಿಗಳು ಭೇಟಿ ನೀಡಿದ್ದು,ಚಿರತೆ ಸೆರೆಗೆ ಬೋನು ಇರಿಸಲು ಕ್ರಮ ಕೈಗೊಳ್ಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!