ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಸಕ ಮುನಿರತ್ನ ತರ ನಾನು ಹೇಡಿಯೂ ಅಲ್ಲ ಕೇಡಿಯೂ ಅಲ್ಲ. ಒಂದು ಕಾಲದಲ್ಲಿ ನಮ್ಮ ಮಿತ್ರರಾಗಿದ್ದ ಶಾಸಕ ಮುನಿರತ್ನರವರು ಹೇಡಿಯಂತೆ ಮನೆಯೊಳಗಿದ್ದ ವೇಳೆ ಅವರಿಗೆ ರಕ್ಷಣೆ ಕೊಟ್ಟಿದ್ದು ಇದೇ ಡಿ.ಕೆ.ಸುರೇಶ್ ಎಂಬುದನ್ನು ಮರೆತು ಇಂದು ಕೊರೋನಾ ಸಂದರ್ಭದಲ್ಲಿ ನಾನು ಮಾಡಿದ ಕಾರ್ಯವನ್ನು ಗೇಲಿ ಮಾಡುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದ್ದಾರೆ.
ನಗರದ ಹೊರವಲಯದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕನಕಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಹೇಡಿ ಯಾರೆಂಬುದು ರಾಜರಾಜೇಶ್ವರಿ ನಗರದ ಜನತೆಗೆ ಗೊತ್ತು.
ಕೊರೊನಾ ವೈರಸ್‌ನಿಂದಾಗಿ ಇಡೀ ದೇಶವೇ ಲಾಕ್‌ಡೌನ್‌ನಲ್ಲಿತ್ತು, ರಾಜ್ಯ ಸರ್ಕಾರಗಳು ಕಣ್ಮುಚ್ಚಿ ನಿಂತಿದ್ದಾಗ ರೈತರು ಬೆಳೆದ ಬೆಳೆ ಮಾರಾಟವಾಗದೆ ನಷ್ಟ ಅನುಭವಿಸುತ್ತಿರುವುದನ್ನು ನಾವು ನೋಡಿದ್ದೇವೆ. ನಾನು ಮತ್ತು ಶಿವಕುಮಾರ್ ರೈತರ ಉತ್ಪನ್ನಗಳನ್ನು ಖರೀದಿಸಿದ್ದೇವೆ. ಜನತೆಗೆ ಹಂಚುವ ಕೆಲಸ ಮಾಡಿದ್ದು ನನ್ನ ಕ್ಷೇತ್ರದ ಜನರಿಗೆ ಕೈಲಾದಷ್ಟು ಸೇವೆ ಮಾಡುವ ಉದ್ದೇಶವೇ ಹೊರತು ಯಾರನ್ನು ಮೆಚ್ಚಿಸಲು ಅಲ್ಲ ಎಂದು ತಿರುಗೇಟು ನೀಡಿದ್ದಾರೆ.