ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯದವರು ಛತ್ರಿಗಳು ಎಂಬ ಡಿ.ಕೆ ಶಿವಕುಮಾರ್ ಹೇಳಿಕೆಗೆ ಜಿಲ್ಲೆಯಲ್ಲಿ ಇದೀಗ ಭಾರೀ ಆಕ್ರೋಶ ವ್ಯಕ್ತವಾಗಿದೆ. ಜನರಿಗೆ ಡಿಕೆಶಿ ಅವಮಾನ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಡಿಕೆಶಿ ವಿರುದ್ಧ ಮಂಡ್ಯ ಜನ ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ಅಧಿಕಾರಕ್ಕಾಗಿ ಮಂಡ್ಯ ಜನರ ಬಳಿ ಬಂದು ಪೆನ್ನು, ಪೇಪರ್ ಕೊಡಿ ಎಂದು ಅಂಗಲಾಚಿದ್ದು ಮರೆತು ಹೋಯ್ತಾ ಡಿಸಿಎಂ ಅವರೇ? ಇಂತಹ ದುರಹಂಕಾರಿಗೆ ಸರಿಯಾದ ಬುದ್ಧಿ ಕಲಿಸಬೇಕು ಎಂದು ಸಾಲು ಸಾಲು ಪೋಸ್ಟ್ ಹಾಕಿ ಆಕ್ರೋಶ ಹೊರಹಾಕಿದ್ದಾರೆ.
ಡಿ.ಕೆ ಶಿವಕುಮಾರ್ ಮಂಡ್ಯ ಜನರ ಕ್ಷಮೆಯಾಚಿಸಬೇಕು. ಇಲ್ಲದಿದ್ದರೇ ಮಂಡ್ಯಕ್ಕೆ ಬಂದರೆ ಕಪ್ಪು ಬಾವುಟ ಪ್ರದರ್ಶನ ಮಾಡುತ್ತೇವೆ. ಜನರ ಪರ ನಿಲ್ಲದ ಕೈ ಶಾಸಕರು ಛತ್ರಿಗಳು ಎಂದು ವಾಗ್ದಾಳಿ ನಡೆಸಿದ್ದಾರೆ.