ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊನೆಗೂ ಭಾರತಕ್ಕೆ ಮುಂಬೈ ದಾಳಿಯ ಉಗ್ರ ತಹವ್ವೂರ್ ರಾಣಾನನ್ನು ಕರೆತರಲಾಗಿದೆ. ಇತ್ತ ಈ ವಿಚಾರ ರಾಜಕೀಯ ತಿರುವು ಪಡೆದುಕೊಂಡಿದೆ.
ಮುಂಬೈ ದಾಳಿಯ ಉಗ್ರರನ್ನು ಬಂಧಿಸುವ ವಿಚಾರದಲ್ಲಿ ಅಂದಿನ ಯುಪಿಎ ಸರ್ಕಾರದ ನಡೆಯನ್ನು ಕೇಂದ್ರ ಸಚಿವ ಪಿಯೂಷ್ ಗೋಯಲ್ ತೀವ್ರವಾಗಿ ಟೀಕಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ತಾಜ್ ಹೋಟೆಲ್ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಅಮಾಯಕರು ಪ್ರಾಣ ಕಳೆದುಕೊಂಡರು. ಆದ್ರೆ ಭಾಗಿಯಾಗಿರುವವರನ್ನು ಶಿಕ್ಷಿಸಲು ಹಿಂದಿನ ಯುಪಿಎ ಸರ್ಕಾರ ಏನೂ ಮಾಡಲಿಲ್ಲ. ಸೆರೆ ಸಿಕ್ಕಿದ್ದ ಏಕೈಕ ಉಗ್ರ ಅಜ್ಮಲ್ ಕಸಬ್‌ಗೆ ಬಿರಿಯಾನಿ ತಿನ್ನಿಸುವ ಕೆಲಸ ಮಾಡಿತ್ತು, ಇದನ್ನು ದೇಶದ ಜನ ಮರೆತಿಲ್ಲ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಮ್ಮ ದೇಶದ ಮೇಲೆ ದಾಳಿ ಮಾಡಿದವರಿಗೆ ನ್ಯಾಯ ದೊರಕಿಸಿಕೊಡುವ ಸಂಕಲ್ಪವನ್ನು ನರೇಂದ್ರ ಮೋದಿ ಅಂದೇ ಮಾಡಿದ್ದರು. ಅಂದು ಮೋದಿ ಮಾಡಿದ ಸಂಕಲ್ಪವನ್ನು ಈಡೇರಿಸಿದ್ದಾರೆ. ಇಂದು ಪ್ರತಿಯೊಬ್ಬ ಭಾರತೀಯ ಪ್ರಜೆಯೂ ಮೋದಿ ಬಗ್ಗೆ ಹೆಮ್ಮೆ ಪಡುತ್ತಾರೆ ಎಂದು ಶ್ಲಾಘಿಸಿದ್ದಾರೆ.