July 17, 2026
Friday, July 17, 2026
spot_img

ಮನೆಗೆ ಬೀಗ ಹಾಕಿಕೊಂಡು ಕೂತಿದ್ದಾರೆ ಈ ಭಾಗದ ಬೆಂಗಳೂರು ಜನ, ಚಿರತೆ ಭಯ ಭಯ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜಧಾನಿ ಬೆಂಗಳೂರಿನ ಒಂದು ಭಾಗದಲ್ಲಿ ಚಿರತೆ ಓಡಾಟ ಕಾಣಿಸಿದೆ. ವಾರದಲ್ಲಿ ನಾಲ್ಕೈದು ಬಾರಿ ಚಿರತೆ ಕಾಣಿಸಿಕೊಂಡಿದ್ದು, ಜನ ಮನೆಯಿಂದ ಹೊರಗೆ ಬರೋದಕ್ಕೆ ಹೆದರುತ್ತಿದ್ದಾರೆ.

ಬೆಂಗಳೂರಿನ ಜೆಪಿ ನಗರದ ಅಂಜನಾಪುರದಲ್ಲಿ ಚಿರತೆ ಕಾಣಿಸಿದೆ. ಬಿಡಿಎ ಲೇಔಟ್‌ನಲ್ಲಿ ಕಳೆದ ಒಂದು ವಾರದಲ್ಲಿ ನಾಲ್ಕೈದು ಬಾರಿ ಚಿರತೆ ಕಾಣಿಸಿಕೊಂಡಿದ್ದು, ಅಲ್ಲಿನ ನಿವಾಸಿಗಳು ಮನೆಯ ಹೊರಗೆ ಹೆಜ್ಜೆ ಇಡುವುದಕ್ಕೂ ಹಿಂಜರಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾತ್ರಿ–ಹಗಲು ಎನ್ನದೆ ಚಿರತೆ ಓಡಾಡುತ್ತಿರುವ ದೃಶ್ಯಗಳು ಮನೆಗಳ ಮುಂದೆ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿವೆ.

ಆಫೀಸ್‌ಗೆ ಹೋಗುವವರು ವರ್ಕ್‌ಫ್ರಮ್‌ ಹೋಮ್‌ ಮಾಡುತ್ತಿದ್ದು, ಮಕ್ಕಳನ್ನು ಶಾಲೆಗೆ ಕಳಿಸದೇ ಮನೆಯಲ್ಲೇ ಇಟ್ಟುಕೊಂಡಿದ್ದಾರೆ.ಅಂಜನಾಪುರದ ಪಕ್ಕದಲ್ಲೇ ತುರಹಳ್ಳಿ ಹಾಗೂ ಬನ್ನೇರುಘಟ್ಟ ಅರಣ್ಯ ಪ್ರದೇಶಗಳಿದ್ದು, ಅಲ್ಲಿನ ಚಿರತೆಗಳು ನಾಡಿನತ್ತ ಬರುತ್ತಿರುವ ಶಂಕೆ ವ್ಯಕ್ತವಾಗಿದೆ.

ದಯವಿಟ್ಟು ಚಿರತೆಯನ್ನು ಹಿಡಿದು ಕಾಡಿಗೆ ಬಿಡಿ, ನಾವು ನೆಮ್ಮದಿಂದ ಓಡಾಡುವಂತೆ ಮಾಡಿ ಎಂದು ಜನ ಆಗ್ರಹಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !