ಮನೆಗೆ ಬೀಗ ಹಾಕಿಕೊಂಡು ಕೂತಿದ್ದಾರೆ ಈ ಭಾಗದ ಬೆಂಗಳೂರು ಜನ, ಚಿರತೆ ಭಯ ಭಯ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜಧಾನಿ ಬೆಂಗಳೂರಿನ ಒಂದು ಭಾಗದಲ್ಲಿ ಚಿರತೆ ಓಡಾಟ ಕಾಣಿಸಿದೆ. ವಾರದಲ್ಲಿ ನಾಲ್ಕೈದು ಬಾರಿ ಚಿರತೆ ಕಾಣಿಸಿಕೊಂಡಿದ್ದು, ಜನ ಮನೆಯಿಂದ ಹೊರಗೆ ಬರೋದಕ್ಕೆ ಹೆದರುತ್ತಿದ್ದಾರೆ. ಬೆಂಗಳೂರಿನ ಜೆಪಿ ನಗರದ ಅಂಜನಾಪುರದಲ್ಲಿ ಚಿರತೆ ಕಾಣಿಸಿದೆ. ಬಿಡಿಎ ಲೇಔಟ್‌ನಲ್ಲಿ ಕಳೆದ ಒಂದು ವಾರದಲ್ಲಿ ನಾಲ್ಕೈದು ಬಾರಿ ಚಿರತೆ ಕಾಣಿಸಿಕೊಂಡಿದ್ದು, ಅಲ್ಲಿನ ನಿವಾಸಿಗಳು ಮನೆಯ ಹೊರಗೆ ಹೆಜ್ಜೆ ಇಡುವುದಕ್ಕೂ ಹಿಂಜರಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾತ್ರಿ–ಹಗಲು ಎನ್ನದೆ ಚಿರತೆ ಓಡಾಡುತ್ತಿರುವ ದೃಶ್ಯಗಳು ಮನೆಗಳ ಮುಂದೆ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿವೆ. … Continue reading ಮನೆಗೆ ಬೀಗ ಹಾಕಿಕೊಂಡು ಕೂತಿದ್ದಾರೆ ಈ ಭಾಗದ ಬೆಂಗಳೂರು ಜನ, ಚಿರತೆ ಭಯ ಭಯ!