ಹೊಸದಿಗಂತ ಹಾಸನ :
ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಜೊತೆಗೆ ಚಿರತೆಗಳ ಕಾಟ ಕೂಡ ಹೆಚ್ಚಾಗಿದ್ದು, ಮನೆಯ ಬಳಿ ಆಹಾರ ಅರಸಿ ಬಂದ ಚಿರತೆಯೊಂದು ಕೆಲಕಾಲ ಮನೆಯ ಆವರಣದಲ್ಲಿ ಭೇಟೆಗಾಗಿ ಕಾದು ಕುಳಿತ ಘಟನೆ ಬೇಲೂರು ತಾಲ್ಲೂಕಿನ, ಲಕ್ಷ್ಮೀಪುರ ಗ್ರಾಮದಲ್ಲಿ ನಡೆದಿದೆ.
ಲಕ್ಷ್ಮೀಪುರ ಗ್ರಾಮದ ಕೃಷ್ಣೇಗೌಡ ಎಂಬುವವರ ಮನೆಯ ಬಳಿ ಆಹಾರ ಅರಸಿ ಚಿರತೆಯೊಂದು ಕಾಣಿಸಿಕೊಂಡಿದೆ. ಹಗಲು ವೇಳೆ ರೈತರ ಜಮೀನಿನಲ್ಲಿ ಕಾಣಿಸಿಕೊಳ್ಳುತ್ತಿರುವ ಚಿರತೆ ನಾಯಿ, ಕೋಳಿ, ಜಾನುವಾರುಗಳನ್ನು ಹೊತ್ತೊಯ್ದು ತಿಂದು ಹಾಕುತ್ತಿದೆ. ಚಿರತೆ ಹಾವಳಿಯಿಂದ ಭಯಭೀತರಾದ ಗ್ರಾಮಸ್ಥರು ಕೂಡಲೇ ಬೋನು ಇಟ್ಟು ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರ ಆಗ್ರಹಿಸಿದ್ದಾರೆ.