ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, June 25, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಶೇ. 70ರಷ್ಟು ಇಳಿಕೆ: ಆರೋಗ್ಯ ಇಲಾಖೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಪ್ರಕರಣಗಳ ಒಟ್ಟು ಸಂಖ್ಯೆ ಶೇ 70ರಷ್ಟು ಕಡಿಮೆಯಾಗಿದೆ ಎಂದು ದೆಹಲಿಯಲ್ಲಿ ಆರೋಗ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ಅಗರ್ವಾಲ್ ಹೇಳಿದ್ದಾರೆ.
ದೇಶದಲ್ಲಿ ಕಳೆದ ನಾಲ್ಕು ದಿನಗಳಿಂದ ಒಟ್ಟು ಸೋಂಕಿತರ ಸಂಖ್ಯೆಒಂದು ಲಕ್ಷಕ್ಕೂ ಕಡಿಮೆಯಾಗಿದೆ. ಈ ಮೂಲಕ ಹೊಸ ಪ್ರಕರಣಗಳ ಪತ್ತೆ ಕಡಿಮೆಯಾಗಿದೆ. ಇದರ ಜೊತೆಗೆ ಸೋಂಕಿತರು ಗುಣಮುಖರಾಗುವ ಪ್ರಮಾಣವೂ ಹೆಚ್ಚಾಗುತ್ತಿದೆ. ದೇಶದಲ್ಲಿ ಸೋಂಕಿತರ ರಿಕವರಿ ರೇಟ್ ಶೇ 94.9ರಷ್ಟು ಇದೆ. 4 ದಿನಗಳಿಂದ ಪಾಸಿಟಿವಿಟಿ ರೇಟ್ ಶೇ 5ಕ್ಕಿಂತ ಕಡಿಮೆ ಇದೆ ಎಂದು ಅವರು ತಿಳಿಸಿದ್ದಾರೆ.
ಕಳೆದ ಮೇ 7ರಂದು ಸೋಂಕು ಉನ್ನತ ಹಂತದಲ್ಲಿತ್ತು. ಅಲ್ಲಿಂದಾಚೆಗೆ ಸೋಂಕು ಸತತವಾಗಿ ಕಡಿಮೆಯಾಗುತ್ತಿದೆ. ಆರೋಗ್ಯ ಕಾರ್ಯಕರ್ತರು ಮತ್ತು ಫ್ರಂಟ್​ಲೈನ್ ವಾರಿಯರ್ಸ್​ಗೆ 2ನೇ ಡೋಸ್ ನೀಡಲು ರಾಜ್ಯಗಳು ಆದ್ಯತೆ ನೀಡಬೇಕು ಎಂದು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss