spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, October 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ನವರಾತ್ರಿಯ ಪೂಜೆ ವೇಳೆ ಮಾಡೆಲ್​ ಮೇಲೆ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳು

- Advertisement -Nitte

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ನವರಾತ್ರಿಯ ದುರ್ಗಾ ಪೂಜೆ ವೇಳೆ ದುಷ್ಕರ್ಮಿಗಳು ಮಾಡೆಲ್​ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಮಹಿಳೆ​​ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾಳೆ.
ಪಾಟ್ನಾದ ರಾಜೀವ್​ ನಗರ ಪೊಲೀಸ್ ಠಾಣಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮಹಿಳಾ ಮಾಡೆಲ್​ ಮನೆಯ ಹತ್ತಿರವೇ ಈ ಘಟನೆ ನಡೆದಿದೆ. ಗುಂಡಿನ ದಾಳಿಗೊಳಗಾದ ಮಾಡೆಲ್ ಅನ್ನು 36 ವರ್ಷದ ಅನಿತಾ ದೇವಿ (ಮೊನಾ ರಾಯ್​) ಎಂದು ಗುರುತಿಸಲಾಗಿದೆ.
ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಅನಿತಾ ನಿವಾಸದ ಪಕ್ಕದ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಸ್ಕೂಟರ್​​ನಲ್ಲಿ ಮನೆಗೆ ಬರುತ್ತಿದ್ದ ವೇಳೆ ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ, ಗಂಭೀರವಾಗಿ ಗಾಯಗೊಂಡಿದ್ದಾಳೆ. ದುರ್ಗಾ ಪೂಜೆ ಕಾರಣ ಸ್ಥಳದಲ್ಲಿ ಧ್ವನಿವರ್ಧಕಗಳ ಶಬ್ದದಿಂದಾಗಿ ಘಟನೆ ಬಗ್ಗೆ ಯಾರಿಗೂ ಗೊತ್ತಾಗಿಲ್ಲ. ಆದರೆ, ಮಾಡೆಲ್​ ಜೊತೆಗಿದ್ದ 12 ವರ್ಷದ ಮಗಳು ಜೋರಾಗಿ ಅಳಲು ಶುರು ಮಾಡಿದ್ದಾಳೆ.
ಈ ವೇಳೆ ಘಟನಾ ಸ್ಥಳಕ್ಕೆ ಬಂದಿರುವ ಕೆಲವರು ಮಾಡೆಲ್​​ನನ್ನ ತಕ್ಷಣವೇ ಖಾಸಗಿ ನರ್ಸಿಂಗ್​ ಹೋಂಗೆ ಸೇರಿಸಿದ್ದಾರೆ. ಚಿಕಿತ್ಸೆ ಮುಂದುವರೆದಿದ್ದು, ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ಯಾವ ಕಾರಣಕ್ಕಾಗಿ ಆಕೆಯ ಮೇಲೆ ಗುಂಡಿನ ದಾಳಿ ನಡೆದಿದೆ ಎಂಬ ಮಾಹಿತಿ ಇಲ್ಲಿಯವರೆಗೆ ಗೊತ್ತಾಗಿಲ್ಲ.
ಅನಿತಾ, ಕೆಲವೊಂದು ಚಿತ್ರಗಳಲ್ಲಿ ನಟನೆ ಮಾಡಿದ್ದು, ಮಿಸ್​ ಅಂಡ್​ ಮಿಸೆಸ್​​ ಗ್ಲೋಬಲ್​​ ಬಿಹಾರದಲ್ಲೂ ಭಾಗಿಯಾಗಿದ್ದರು. ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಪೊಲೀಸರು ಈಗಾಗಲೇ ತನಿಖೆ ಆರಂಭಿಸಿದ್ದು, ಇಲ್ಲಿಯವರೆಗೆ ಯಾವುದೇ ರೀತಿಯ ಸುಳಿವು ಲಭ್ಯವಾಗಿಲ್ಲ ಎನ್ನಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss