ಅಂದು ಮೃತಪಟ್ಟಿದನೆಂದು ಆಸ್ಪತ್ರೆಯಿಂದ ಮನೆಗೆ ಬರುವಾಗ ಬದುಕಿ ಅಚ್ಚರಿ ಮೂಡಿಸಿದ ವ್ಯಕ್ತಿ ಇಂದು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್;

ಹಾವೇರಿಯಲ್ಲಿ ಕೆಲ ದಿನಗಳ ಹಿಂದೆ ಸಾವನ್ನಪ್ಪಿದ್ದಾನೆಂದು ಆಸ್ಪತ್ರೆಯಿಂದ ಊರಿಗೆ ಕರೆತರುತ್ತಿದ್ದಾಗ ಏಕಾಏಕಿ ಎದ್ದುಕುಳಿತಿದ್ದ ವ್ಯಕ್ತಿ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಫೆಬ್ರವರಿ 9 ರಂದು ಹಾವೇರಿ ಜಿಲ್ಲೆಯ ಬಂಕಾಪುರ ಗ್ರಾಮದ ಬಿಷ್ಣಪ್ಪ ಅಶೋಕ ಗುಡಿಮನಿ (45) ಸತ್ತಿದ್ದ ಎಂದು ಸ್ವಗ್ರಾಮಕ್ಕೆ ಮೃತದೇಹ ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ಬಂಕಾಪುರ ಹತ್ತಿರ ಬರುತ್ತಿದ್ದಂತೆ ಪತ್ನಿ “ಡಾಬಾ ಬಂತು ನೋಡು ಊಟ ಮಾಡುತ್ತೀಯಾ?’ ಎಂದು ಗೋಳಾಡಿ ಕಣ್ಣೀರಿಟ್ಟಾಗ, ಮೃತವ್ಯಕ್ತಿ ಉಸಿರಾಡಿರುವುದು ಕಂಡುಬಂದಿತ್ತು.

ವೈದ್ಯರು ತಪಾಸಣೆ ಮಾಡಿದಾಗ ವ್ಯಕ್ತಿ ಬದುಕಿರೋದು ದೃಢವಾಗಿತ್ತು. ಬಳಿಕ ಕಿಮ್ಸ್ ನ ತುರ್ತು ಚಿಕಿತ್ಸಾ ಘಟಕದಲ್ಲಿ ಬಿಷ್ಣಪ್ಪ ಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ದುರದೃಷ್ಟವಶಾತ್‌ ಅಶೋಕ್‌ ಗುಡಿಮನಿ ಇಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!