Sunday, March 26, 2023

Latest Posts

ಕಾರ್ಯಕ್ರಮಕ್ಕೆ ಆಹ್ವಾನ ಇರಲಿಲ್ಲ ಎಂದ ಸುದೀಪ್, ಕಿಚ್ಚನ ತಂದೆಗೆ ಆಹ್ವಾನ ಕೊಟ್ಟ ಫೋಟೊ ವೈರಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಾಲ್ಮೀಕಿ ಮಠದ ಆವರಣದಲ್ಲಿ, ವಾಲ್ಮೀಕಿ ಜಾತ್ರೆಗೆ ಕಿಚ್ಚ ಸುದೀಪ್ ಆಗಮಿಸದ ಹಿನ್ನೆಲೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚೇರ್‌ಗಳನ್ನು ಎಸೆದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸುದೀಪ್ ಟ್ವೀಟ್ ಮಾಡಿದ್ದು, ನನಗೆ ಬರೋದಕ್ಕೆ ಆಸೆ ಇತ್ತು ಆದರೆ ಕಾರ್ಯಕ್ರಮದ ಆಯೋಜಕರಿಂದ ಆಹ್ವಾನ ಇರಲಿಲ್ಲ ಎಂದು ಸುದೀಪ್ ಹೇಳಿದ್ದಾರೆ. ನಿಮ್ಮ ಜೊತೆ ಬೆರೆಯೋಕೆ ನನಗೂ ಆಸೆ, ಮುಂದೆ ಭೇಟಿ ಮಾಡೋಣ, ಶಾಂತ ರೀತಿಯಲ್ಲಿ ವರ್ತಿಸಿ ಎಂದು ಸುದೀಪ್ ಹೇಳಿದ್ದಾರೆ.

ಈ ಬೆನ್ನಲ್ಲೇ ಸುದೀಪ್ ಮನೆಗೆ ಪ್ರಸನ್ನಾನಂದಪುರಿ ಸ್ವಾಮೀಜಿ ಬಂದು, ಖುದ್ದಾಗಿ ಜಾತ್ರೆಗೆ ಬರುವಂತೆ ಆಹ್ವಾನಿಸಿದ ಫೋಟೊವೊಂದು ವೈರಲ್ ಆಗಿದೆ. ಸುದೀಪ್ ಮನೆಯಲ್ಲಿ ಇರದ ಕಾರಣ, ತಂದೆ ಸಂಜೀವ್ ಅವರಿಗೆ ಆಹ್ವಾನ ನೀಡಲಾಗಿದೆ.

ಕಾರ್ಯಕ್ರಮಕ್ಕೆ ಸುದೀಪ್ ಬಂದಿಲ್ಲ ಎನ್ನುವ ಕೋಪಕ್ಕೆ ಅಭಿಮಾನಿಗಳು ಕುರ್ಚಿಗಳನ್ನು ಮುರಿದು, ಬ್ಯಾರಿಕೇಡ್‌ಗಳನ್ನು ನೆಲಕ್ಕುರುಳಿಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಇವರನ್ನು ನಿಯಂತ್ರಿಸಲು ಬಂದಿದ್ದ ಪೊಲೀಸರ ಮೇಲೂ ಹಲ್ಲೆ ಮಾಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!