ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಹಮದಾಬಾದ್ ವಿಮಾನ ಪತನ ದುರಂತ ನಿಜಕ್ಕೂ ದುರದುಷ್ಟಕರ ಘಟನೆಯಾಗಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ ಆಗಿದೆ. ಈ ಘಟನೆ ನಡೆದಿರುವುದು ನನಗೆ ಆಶ್ಚರ್ಯ ತರಿಸಿದೆ. ನಾನು ಭಗವಂತನಲ್ಲಿ ಪ್ರಾರ್ಥನೆ ಮಾಡುತ್ತೇನೆ. ಈ ದೇಶದಲ್ಲಿ ಹೆಚ್ಚು ಸಾವು ಆಗಬಾರದು. ದುರಂತದಲ್ಲಿ ಸಾವನ್ನಪ್ಪಿದವರ ಆತ್ಮಕ್ಕೆ ದೇವರು ಶಾಂತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.