ಶಿವಮೊಗ್ಗದಲ್ಲಿ ಲ್ಯಾಂಡ್ ಆಗದ ವಿಮಾನ: ಸಚಿವ ಜಿ.ಪರಮೇಶ್ವರ್ ಬೆಂಗಳೂರಿಗೆ ವಾಪಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗೃಹ ಸಚಿವ ಜಿ.ಪರಮೇಶ್ವರ್ ಪ್ರಯಾಣಿಸುತ್ತಿದ್ದ ವಿಮಾನ ಶಿವಮೊಗ್ಗದಲ್ಲಿ ಲ್ಯಾಂಡ್ ಆಗದೇ ಬೆಂಗಳೂರಿಗೆ ಹಿಂತಿರುಗಿದ ಘಟನೆ ನಡೆದಿದೆ.

ಇಂದು ಸೊರಬ, ತೀರ್ಥಹಳ್ಳಿಯಲ್ಲಿ ಪೊಲೀಸ್ ವಸತಿ ಗೃಹ ಉದ್ಘಾಟನೆಗೆ ಗೃಹ ಸಚಿವ ಪರಮೇಶ್ವರ್ ತೆರಳಿದ್ದ ಇಂಡಿಗೋ ವಿಮಾನ ಹವಾಮಾನ ವೈಪರೀತ್ಯ ಹಿನ್ನೆಲೆ ಶಿವಮೊಗ್ಗದಲ್ಲಿ ಲ್ಯಾಂಡ್ ಆಗಲಿಲ್ಲ. ಹೀಗಾಗಿ ವಾಪಸ್ ಬೆಂಗಳೂರಿಗೆ ಹಿಂತಿರುಗಿದೆ.

ಸೊರಬದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಪೊಲೀಸ್ ವಸತಿಗೃಹಗಳ ಸಮುಚ್ಛಯ ಉದ್ಘಾಟನಾ ಕಾರ್ಯಕ್ರಮ ಹಾಗೂ ಮಧ್ಯಾಹ್ನ 3.45 ರಿಂದ 4.15ರವರೆಗೆ ತೀರ್ಥಹಳ್ಳಿಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಪೊಲೀಸ್ ಠಾಣಾ ಕಟ್ಟಡ, ಪೊಲೀಸ್ ವಸತಿಗೃಹಗಳ ಸಮುಚ್ಛಯ ಮತ್ತು ನೂತನ ಅಗ್ನಿಶಾಮಕ ಠಾಣಾ ಕಟ್ಟಡದ ಉದ್ಘಾಟನಾ ಸಮಾರಂಭಗಳಲ್ಲಿ ಭಾಗವಹಿಸಲಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!