ದರ್ಶನ್‌ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಕೆಗೆ ಪೊಲೀಸ್‌ ಇಲಾಖೆ ರೆಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ಗೆ ಹೈಕೋರ್ಟ್‌ ನೀಡಿದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಲು ಗೃಹ ಸಚಿವಾಲಯ ಅನುಮತಿ ನೀಡಿದೆ.

ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಕೆ ಮಾಡುತ್ತೇವೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ದಯಾನಂದ್‌ ಹೇಳಿದ್ದಾರೆ.

ಸೋಮವಾರದ ಬಳಿಕ ಪೊಲೀಸರು ಮೇಲ್ಮನವಿ ಸಲ್ಲಿಕೆ ಮಾಡುವ ಸಾಧ್ಯತೆಯಿದೆ. ಈ ಪ್ರಕರಣದಲ್ಲಿ ಪೊಲೀಸರ ಪರವಾಗಿ ವಾದ ಮಂಡಿಸಲು ಹಿರಿಯ ವಕೀಲ ವಿಎನ್‌ ರಘುಪತಿ ಅವರನ್ನು ಗೃಹ ಸಚಿವಾಲಯ ನೇಮಿಸಿದೆ.

ಅನಾರೋಗ್ಯದ ಕಾರಣಕ್ಕಾಗಿ ದರ್ಶನ್‌ ಅವರಿಗೆ ಹೈಕೋರ್ಟ್‌ 6 ವಾರಗಳ ಮಧ್ಯಂತರ ಜಾಮೀನನ್ನು ಮಂಜೂರು ಮಾಡಿತ್ತು. ಬೆಂಗಳೂರಿನ ಬಿಜಿಎಸ್‌ ಆಸ್ಪತ್ರೆಯಲ್ಲಿ ದಾಖಲಾಗಿರುವ ದರ್ಶನ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಇನ್ನೂ ಕೂಡ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿಲ್ಲ. ಈ ಎಲ್ಲಾ ಅಂಶಗಳನ್ನು ಪೊಲೀಸರು ಮೇಲ್ಮನವಿ ಅರ್ಜಿಯಲ್ಲಿ ಪ್ರಸ್ತಾಪಿಸಲಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!