ಹೊಸದಿಗಂತ ಮಂಗಳೂರು:
ಉಡುಪಿ ಜಿಲ್ಲೆ ಕುಂದಾಪುರದಲ್ಲಿ ವರ್ಷದ ಹಿಂದೆ ಕಳವಾಗಿದ್ದ ಚಿನ್ನಾಭರಣ ಮುಂಬೈನಲ್ಲಿ ಪತ್ತೆಯಾಗಿದೆ!
2023ರ ಜೂನ್ 20ರಂದು ಕುಂದಾಪುರದ ಖಾಸಗಿ ಹೊಟೇಲೊಂದರಿಂದ ಚಿನ್ನದ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಒಬ್ಬರಿಗೆ ಸೇರಿದ ಬರೋಬ್ಬರಿ ಇಪ್ಪತ್ತೆರಡೂವರೆ ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿತ್ತು. ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿತ್ತು. ಕಳ್ಳರ ಜಾಡು ಬೆನ್ನತ್ತಿದ ಪೊಲೀಸರು ವರ್ಷದ ಬಳಿಕ ಯಶಸ್ವಿಯಾಗಿದ್ದಾರೆ. ಈ ಸಂಬಂಧ ರಾಜಸ್ಥಾನದ ಪಾಲಿ ಜಿಲ್ಲೆಯ ಖೋರ್ ಗ್ರಾಮದ ರಾನ್ ರಾಯಲ್ ಯಾನೆ ಬಾಳು ರಾಮ್ (21) ಹಾಗೂ ಸೇವಾರಿ ಗ್ರಾಮ ಬರ್ಲಾಬೆರಾ ಗ್ರಾಮದ ಪ್ರವೀಣ್ ಕುಮಾರ್ (25) ಎಂಬ ಇಬ್ಬರನ್ನು ಬಂಧಿಸಲಾಗಿದ್ದು, ಇವರಿಂದ ಸುಮಾರು 10 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕುಂದಾಪುರ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ