ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ಪ್ರತಿಭಟನೆಗೆ ಕರ್ನಾಟಕ ಸರ್ಕಾರ ಮುಂದಾಗಿದೆ. ಈಗಾಗಲೇ ಕಾಂಗ್ರೆಸ್ ಶಾಸಕರು, ಸಚಿವರು ಸೇರಿದಂತೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಹಾರಿದ್ದಾರೆ. ಇನ್ನು ದೆಹಲಿಯ ಜಂತರ್ ಮಂತರ್ನಲ್ಲಿ (Delhi jantar mantar) ಕರ್ನಾಟಕ ಸರ್ಕಾರದ ಪ್ರತಿಭಟನೆಗೆ ದಿಲ್ಲಿ ಪೊಲೀಸ್ (Delhi Police)ಕೇವಲ ಅರ್ಧ ಗಂಟೆ ಅವಕಾಶ ನೀಡಿದೆ.
ಕೇಂದ್ರದ ವಿರುದ್ಧ ಪ್ರತಿಭಟನೆಗೆ ಕಾಂಗ್ರೆಸ್ ಶಾಸಕರು ಹಾಗೂ ಸಚಿವರು ದೆಹಲಿಗೆ ತೆರಳಿದ್ದಾರೆ. ಸಿಎಂ ಹಾದಿಯಾಗಿ ಡಿಸಿಎಂ ಸೇರಿದಂತೆ ಸಚಿವರು, ಶಾಸಕರು ದೆಹಲಿ ತಲುಪಿದ್ದು, ನಾಳೆ ಅಂದರೆ ಫೆಬ್ರವರಿ 07 (ಬುಧವಾರ) ಬೆಳಗ್ಗೆ 11 ಗಂಟೆಯಿಂದ ಜಂತರ್ ಮಂತರ್ ಪ್ರತಿಭಟನೆ ಮಾಡಲು ಫಿಕ್ಸ್ ಆಗಿತ್ತು. ಆದ್ರೆ, ದೆಹಲಿ ಪೊಲೀಸ್, ನಾಳೆ ಮಧ್ಯಾಹ್ನ 12.30ರಿಂದ 1ರವರೆಗೆ ಮಾತ್ರ ಜಂತರ್ ಮಂತರ್ನಲ್ಲಿ ಪ್ರತಿಭಟನೆಗೆ ಅವಕಾಶ ನೀಡಿದೆ.