ಹೊಸ ದಿಗಂತ ವರದಿ,ತುಮಕೂರು:
ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ರೈಲ್ವೇ ನಿಲ್ದಾಣದ ಸಮೀಪ ಶನಿವಾರ ನಡೆದಿದೆ.
ಮೃತ ವ್ಯಕ್ತಿಯನ್ನು ಶಿವಪ್ರಕಾಶ್ ಆರಾಧ್ಯ(55) ಎಂದು ಗುರುತಿಸಲಾಗಿದ್ದು, ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದರು. ಈ ಹಿಂದೆ ತುರುವೇಕೆರೆ ಪೊಲೀಸ್ ಠಾಣೆಯಲ್ಲಿಯೂ ಕೆಲಸ ಮಾಡಿದ್ದರು.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಯಶವಂತಪುರ ರೈಲ್ವೇ ಹಾಗೂ ಗುಬ್ಬಿ ಪೊಲೀಸರು ಭೇಟಿ ನೀಡಿದ್ದು ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.