ಹರಿಯಾಣ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭೇಟಿಗೆ ಮುಂದಾದ ಕಾಂಗ್ರೆಸ್ ನಿಯೋಗವನ್ನು ತಡೆ ಹಿಡಿದ ಪೊಲೀಸರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹರಿಯಾಣದ ಹಿಂಸಾಚಾರ ಪೀಡಿತ ಗುರುಗ್ರಾಮ, ನೂಹ್‌ ಪ್ರದೇಶಗಳಿಗೆ ಭೇಟಿ ನೀಡಲು ಮುಂದಾದ ಕಾಂಗ್ರೆಸ್ ನಿಯೋಗವನ್ನು ಪೊಲೀಸರು ತಡೆದಿದ್ದಾರೆ.

ಕಾಂಗ್ರೆಸ್ ಸಂಸದ ದೀಪೇಂದರ್ ಹೂಡಾ ಸೇರಿದಂತೆ ಹರಿಯಾಣ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷ ಉದಯ್ ಭಾನ್ , ಒಂಬತ್ತು ಸದಸ್ಯರು ಇದ್ದರು.

‘ನಮ್ಮ ನಿಯೋಗವು ನೂಹ್‌, ನಲ್ಹಾರ್ ಮಂದಿರ ಮತ್ತು ಮಾರುಕಟ್ಟೆ ಪ್ರದೇಶಗಳಿಗೆ ಭೇಟಿ ನೀಡಲು ಬಯಸಿದ್ದು, ನಾವು ಸ್ಥಳೀಯರೊಂದಿಗೆ ಮಾತನಾಡಬೇಕಿದೆ. ಆದರೆ, ಈ ಎಲ್ಲಾ ಪ್ರದೇಶಗಳಲ್ಲೂ ಸಾಕಷ್ಟು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಇದನ್ನು ಸರ್ಕಾರ ಮೊದಲೇ ಮಾಡಿದ್ದರೆ ಘರ್ಷಣೆ ಸಂಭವಿಸುತ್ತಿರಲಿಲ್ಲ’ ಎಂದು ದೀಪೇಂದರ್ ಹೂಡಾ ಹೇಳಿದ್ದಾರೆ.

ಹಿಂಸಾಚಾರದ ಹಿನ್ನೆಲೆಯಲ್ಲಿ ನೂಹ್‌ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಇಂಟರ್‌ನೆಟ್‌ ಸೇವೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!