ಹೊಸದಿಗಂತ ವರದಿ ಶಿವಮೊಗ್ಗ :
ಕರಸೇವಕರ ಬಂಧನ ಖಂಡಿಸಿ ಹಾಗೂ ನಾನೂ ಕರಸೇವಕ ನನ್ನನ್ನೂ ಬಂಧಿಸಿ ಎಂದು ಜಿಲ್ಲಾ ರಕ್ಷಣಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ಶಾಸಕರಾದ ಎಸ್. ಎನ್. ಚನ್ನಬಸಪ್ಪ, ಎಸ್. ರುದ್ರೇಗೌಡ, ಮಾಜಿ ಶಾಸಕರಾದ ಎಂ.ಬಿ. ಭಾನುಪ್ರಕಾಶ್, ಹರತಾಳು ಹಾಲಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್ ಮೊದಲಾವರನ್ನು ಪೊಲೀಸರು ಗುರುವಾರ ಬಂಧಿಸಿದರು.
ನಗರದ ಬಸ್ ನಿಲ್ದಾಣ ಬಳಿಯ ಅಶೋಕ ವೃತ್ತದಲ್ಲಿ ಪ್ರತಿಭಟನಾ ಸಭೆ ನಡೆಸಿದ ಬಳಿಕ ಜಿಲ್ಲಾ ರಕ್ಷಾಧಿಕಾರಿ ಕಚೇರಿಗೆ ಪಾದಯಾತ್ರೆ ಮೂಲಕ ತೆರಳಿ ಮುತ್ತಿಗೆ ಹಾಕಲು ಯತ್ನಿಸಿದರಿಂದ ಪ್ರಮುಖ ನಾಯಕರನ್ನು ಬಂಧಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಈಗ ಮೂವರು ಕರಸೇವಕರನ್ನು ಬಂಧಿಸಲಾಗಿದೆ. ಮುಂದೆ ಮೂರು ಕೋಟಿ ಕರಸೇವಕರು ಬಂಧನವಾಗಲು ಸಿದ್ಧರಾಗಿದ್ದೇವೆ. ತಾಕತ್ತಿದ್ದರೆ ಸರ್ಕಾರ ಎಲ್ಲರನ್ನು ಬಂಧಿಸಲಿ ಎಂದು ಸವಾಲು ಹಾಕಿದರು.